ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (75) ಅವರು ಇಂದು ನಿಧನವಾಗಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಬೆಳಗ್ಗೆ ಮೈಸೂರಿಗೆ ಕೊಂಡೊಯ್ದು, ಮೈಸೂರಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕದ ದರ್ಶನಕ್ಕೆ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜನತಾ ಪರಿವಾರದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ವಿ.ಶ್ರೀನಿವಾಸ್ ಪ್ರಸಾದ್ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ಶ್ರೀನಿವಾಸ್ ಪ್ರಸಾದ್, ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತರಾಗಿದ್ದರು. ಚಾಮರಾಜನಗರ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಸಾದ್, ಕಳೆದ ಮಾರ್ಚ್ 17 ರಂದು ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅಲ್ಲದೇ ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಪೂರ್ತಿ ಹೆಸರು: ವೆಂಕಟಯ್ಯ ಶ್ರೀನಿವಾಸ ಪ್ರಸಾದ್
ಹುಟ್ಟೂರು: ಅಶೋಕಪುರಂ, ಮೈಸೂರು
ಜನನ: 6 ಆಗಸ್ಟ್ 1947
ತಂದೆ: ವೆಂಕಟಯ್ಯ
ಪತ್ನಿ: ಭಾಗ್ಯಲಕ್ಷ್ಮಿ
ಮಕ್ಕಳು: ಪ್ರತಿಮಾ ಪ್ರಸಾದ್, ಐ.ಆರ್​.ಎಸ್. ಅಧಿಕಾರಿ, ಪೂರ್ಣಿಮಾ ಪ್ರಸಾದ್, ಮಾಜಿ ಶಾಸಕ ಹರ್ಷವರ್ಧನ್ ಪತ್ನಿ, ಪೂನಂ ಪ್ರಸಾದ್, ಬಿಜೆಪಿ ಮುಖಂಡ ಡಾ.ಮೋಹನ್ ಪತ್ನಿ .

ಶ್ರೀನಿವಾಸ್ ಪ್ರಸಾದ್ ರಾಜಕೀಯದ ಏಳುಬೀಳು

  • ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದ.
  • ನಂಜನಗೂಡು ಕ್ಷೇತ್ರದಿಂದ 2 ಬಾರಿ ಶಾಸಕ.
  • 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ
  • 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು .
  • 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆ
  • 2017ರಲ್ಲಿ ನಂಜನಗೂಡು ಉಪಚುನಾವಣೆಯಲ್ಲಿ ಸೋಲು
  • 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.
  • 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ.

Leave a Reply

Your email address will not be published. Required fields are marked *