ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅನುಮೋದನೆ ನೀಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆ ಆರಂಭಿಸಿ, ತನಿಖೆಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಎಸಿಎಸ್ ಗೆ ರಾಜ್ಯಪಾಲರು ನೋಟಿಸ್ ಜಾರಿ ಮಾಡಿದ್ದಾರೆ.
ಇದೇ ವೇಳೆ ದೂರುದಾರರಾದ ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್ ಕುಮಾರ್ ಅವರಿಗೆ ರಾಜ್ಯಪಾಲರು ನೋಟೀಸ್ ನೀಡಿದ್ದು, ಅಬ್ರಹಾಂ ಅವರು ರಾಜಭವನಕ್ಕೆ ಬಂದು ಭೇಟಿ ಮಾಡುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ನಿವೇಶನಗಳನ್ನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಮೂವರು ಸಾಮಾಜಿಕ ಕಾರ್ಯಕರ್ತರು ರಾಜ್ಯಪಾಲರಿಗೆ ದೂರು ನೀಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದ್ದು, ಈಗ ರಾಜ್ಯ ಸರ್ಕಾರದ ನಡೆ ಮತ್ತು ಸಿದ್ದರಾಮಯ್ಯನವರ ಮೇಲೆ ಪ್ರಾಸಿಕೂಷನ್‌ಗೆ ಆದೇಶಿಸಿರುವುದರಿಂದ ಮುಂದಿನ ನಡೆಯ ಬಗ್ಗೆ ಕಾದು ನೋಡಬೇಕಾಗಿದೆ.