ವಾಸವಿರುವ ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ

ತುಮಕೂರು : ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಖಾಸಗಿ/ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ, ಬಸ್-ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಪರಿಶೀಲಿಸಿ, ಅವುಗಳ ಸಂಖ್ಯೆಯನ್ನು ಲೆಕ್ಕ ಮಾಡಿ, ಕೂಡಲೇ ಮಹಾನಗರ ಪಾಲಿಕೆಯ ಆಯುಕ್ತರಿಗೆ ವರದಿ ನೀಡಬೇಕೆಂದು ಪಾಲಿಕೆ ಆಯುಕ್ತರು ಸಂಬಂಧಿಸಿದ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.

ಸರ್ವೋಚ್ಛ ನ್ಯಾಯಾಲಯ ಆದೇಶದನ್ವಯ ಬೀದಿ ನಾಯಿಗಳ ಉಪಟಳ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಬೀದಿ ನಾಯಿಗಳ ಪ್ರದೇಶವನ್ನು ನಿಯಂತ್ರಿಸಲು ಹಾಗೂ ಅವುಗಳ ಪ್ರವೇಶವನ್ನು ನಿರ್ಬಂಧಿಸಲು, ನಗರ ಸ್ಥಳೀಯ ಸಂಸ್ಥೆಯಿಂದ ಸ್ಥಳಾಂತರಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಗಳ ಒಬ್ಬ ಜವಾಬ್ದಾರಿಯುತ ನೌರಕನನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಬೇಕು.

ಸಂಸ್ಥೆಯ ಆವರಣದಲ್ಲಿ ಪುನಃ ಬೀದಿ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟರೆ ಸ್ಥಳಾಂತರ ವೆಚ್ಚವನ್ನು ಸಂಬಂಧಿತ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುವುದು. ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *