ನಾಳೆಯಿಂದ ನಂದಿನಿ ಹಾಲು ಬೆಲೆ 3 ರೂ ಹೆಚ್ಚಳ

ಬೆಂಗಳೂರು : ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಾಳೆಯಿಂದ ಈ ಪರಿಷ್ಕ್ರತ ದರ ಜಾರಿಯಾಗಲಿದ್ದು, ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಟೋನ್ಡ್ ಹಾಲಿನ ದರ ಪ್ರತಿ ಲೀಟರ್ ಗೆ 37 ರಿಂದ 40 ರೂಗೆ ಹೆಚ್ಚಳವಾಗಿದೆ. ಸಮೃದ್ದಿ ಹಾಲಿನ ದರ 48 ರಿಂದ 51 ರೂ ಗೆ ಹೆಚ್ಚಳವಾಗಿದೆ, ಸ್ಪೆಷಲ್ ಹಾಲಿನ ದರ 43 ರಿಂದ 46 ರೂಗೆ ಹೆಚ್ಚಳ ಮಾಡಲಾಗಿದೆ ಹಾಗೂ ಮೊಸರಿನ ಬೆಲೆ ಕೆಜಿಗೆ 45 ರಿಂದ 48 ರೂ ಹೆಚ್ಚಳವಾಗಿದೆ. ಈ ಹಣವನ್ನು ನೇರವಾಗಿ ರೈತರಿಗೆ ಪ್ರೋತ್ಸಾಹ ಧನವಾಗಿ ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ಈಗಾಗಲೇ ದಿನದಿತ್ಯ ವಸ್ತುಗಳ ಬೆಲೆ ಎರಿಕೆ ಶಾಕ್ ನಲ್ಲಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.ನಂದಿನಿ ಹಾಲಿನ ದರವನ್ನು ಶೀಘ್ರವೇ ಲೀಟರ್ ಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಇತ್ತೀಚೆಗೆತಿಳಿಸಿದ್ದರು. ಶೀಘ್ರದಲ್ಲೇ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿ ಪ್ರತಿ ಲೀಟ ರ್ ಹಾಲಿಗೆ 3 ರೂ. ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದರು.ಅಂತೆಯೇ ದರ ಹೆಚ್ಚಳವಾಗಿದೆ.

ನಂದಿನಿ ಹಾಲಿನ ದರ ಪರಿಷ್ಕರಣೆ ಹಣ ಸಂಪೂರ್ಣವಾಗಿ ರೈತರಿಗೆ ಸಂದಾಯವಾಗಲಿದೆ. ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಕೆಎಂಎಫ್ ಗೆ ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವ ಸಲ್ಲಿಸಿವೆ. ರೈತರ ಹೈನುಗಾರಿಕೆ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದಿದ್ದರು.

Leave a Reply

Your email address will not be published. Required fields are marked *