ಆ.15ರೊಳಗೆ ಒಳಮೀಸಲಾತಿ ಜಾರಿಗೊಳಿಸದಿದ್ದರೆ ಅಸಹಕಾರ ಚಳುವಳಿ

ತುಮಕೂರು:ರಾಜ್ಯದಕಾಂಗ್ರೆಸ್ ಸರಕಾರ ಆಗಸ್ಟ್ 15ರೊಳಗೆ ಸುಪ್ರಿಂಕೋರ್ಟ್‍ಆದೇಶದ ಅನ್ವಯ ಒಳಮೀಸಲಾತಿ ಜಾರಿಗೊಳಿಸದಿದ್ದರೆ,ಕಂಡುಕಂಡಲ್ಲಿ ಸರಕಾರದ ಸಚಿವರು, ಶಾಸಕರುಗಳಿಗೆ ಘೇರಾವ್ ಹಾಕುವುದರ ಜೊತೆಗೆ,ಅಸಹಕಾರ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಮಾದಿಗ ಮುಖಂಡರಾದ ನಿವೃತ್ತಐಎಎಸ್ ಅಧಿಕಾರಿಗಳಾದ ಅನಿಲ್‍ಕುಮಾರ್ ತಿಳಿಸಿದರು.

ಮಾದಿಗ ಸಂಘಟನೆಗಳ ಒಕ್ಕೂಟದಿಂದ ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನಗರದ ಟೌನ್‍ಹಾಲ್ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿತಲುಪಿದ ವೇಳೆ ಮಾತನಾಡಿದ ಅವರು,ಒಳಮೀಸಲಾತಿ ಜಾರಿಯ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಸರಕಾರಕ್ಕೆ ನೀಡಿರಾಷ್ಟ್ರದ ಸರ್ವೋಚ್ಚ ನ್ಯಾಯಾಲಯತೀರ್ಪು ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ.ಆದರೆ ನಿಖರ ದತ್ತಾಂಶದ ಹೆಸರಿನಲ್ಲಿ ಕಾಂಗ್ರೆಸ್ ಸರಕಾರ ಮೀನಾಮೇಷ ಎಣಿಸುತ್ತಿದೆ.ಇದು ಮಾದಿಗ ವಿರೋಧಿ ಸರಕಾರಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಅಂತಿಮವಾಗಿ ಇಡೀ ಮಾದಿಗ ಸಮುದಾಯಕ್ಕೆ ಉಳಿದಿರುವ ಏಕೈಕ ಮಾರ್ಗವೆಂದರೆ ಒಳಮೀಸಲಾತಿ ಜಾರಿ ಮಾಡಿ ಇಲ್ಲವೇ, ಕುರ್ಚಿ ಖಾಲಿ ಮಾಡಿ ಎಂಬುದಾಗಿದೆ ಎಂದರು.

ಚಿತ್ರದುರ್ಗದಲ್ಲಿ ನಡೆದ ಐಕ್ಯ ಸಮಾವೇಶ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಣಾಳಿಕೆಯಲ್ಲಿ ಒಳಮೀಸಲಾತಿ ಜಾರಿ ಮಾಡಿಯೇತೀರುತ್ತೇವೆ ಎಂದು ಹೇಳಿದ ಕಾಂಗ್ರೆಸ್ ಸರಕಾರ ಸಂವಿಧಾನತಿದ್ದು ಪಡಿಯ ನೆಪವೊಡ್ಡಿ ಕೆಲ ಸಮಯ ವ್ಯರ್ಥ ಮಾಡಿದರೆ, ಸುಪ್ರಿಂಕೋರ್ಟಿನ ತೀರ್ಪುನ ನಂತರವೂ ಅನಗತ್ಯ ವಿಳಂಬ ಮಾಡುತ್ತಿದೆ. ನ್ಯಾ.ನಾಗಮೋಹನ್‍ದಾಸ್ ಆಯೋಗಕ್ಕೆ ಸರಿಯಾದ ಮಾಹಿತಿ ದೊರೆಯದಂತೆ ಒಳಮೀಸಲಾತಿ ವಿರೋಧಿ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ನೋಡಿಕೊಳ್ಳುತಿದ್ದಾರೆ. ಪ್ರಾಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ ಸರಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷದ ನಂತರವೂ ಈ ಕುರಿತುಚಕಾರಎತ್ತುತ್ತಿಲ್ಲ.ಮಾದಿಗರಋಣ ನಿಮ್ಮ ಮೇಲಿದೆ ಎಂಬ ಎಚ್ಚರಿಕೆಯನ್ನು ನೀಡುತ್ತೇವೆಎಂದರು.

ಜಿಲ್ಲಾ ಪಂಚಾಯ್ತಿ ಮಾಜಿಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ, ರಾಜ್ಯ ಸರಕಾರ ಒಳಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವುದು ಪರಿಶಿಷ್ಟ ಜಾತಿಯವರಲ್ಲಿಆತಂಕ ಸೃಷ್ಟಿಯಾಗಿದೆ. ಸಾವಿರಾರುಯುವಜನರುಉದ್ಯೋಗಕ್ಕಾಗಿ ಕಾಯುತಿದ್ದಾರೆ. ಒಳಮೀಸಲಾತಿ ಜಾರಿಯ ಒಂದೊಂದು ದಿನದ ವಿಳಂಬವೂ ಪರಿಶಿಷ್ಟ ಜಾತಿಯವರುಆಯುಷು ಕಳೆದುಕೊಳ್ಳುವಂತಾಗಿದೆ.ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಮಂಡಳಿಯ ನೇಮಕಾತಿಗಳಿಗಾಗಿ ಸುಮಾರುಎರಡು ಲಕ್ಷಜನ ಒಳಮೀಸಲಾತಿಗಾಗಿ ಕಾಯುವಂತಾಗಿದೆ. ಒಳಮೀಸಲಾತಿಗಾಗಿ ರಕ್ತಕೊಡಲು ಸಿದ್ದ, ರಕ್ತ ಹರಿಸಲು ಸಿದ್ದ ಎಂಬ ಎಚ್ಚರಿಕೆಯನ್ನುಕೊಡಲು ಬಯಸುತ್ತೇವೆ.ಜಿಲ್ಲಾಉಸ್ತುವಾರಿ ಸಚಿವರಾಗಿರುವ ಡಾ.ಜಿ.ಪರಮೇಶ್ವರ ಶಾಶ್ವತವಾಗಿಅಧಿಕಾರದಲ್ಲಿಇರಲು ಸಾಧ್ಯವಿಲ್ಲ.ಇರುವವರೆಗಾದರೂ ನಾಲ್ಕು ಜನರಿಗೆ ಉಪಯೋಗವಾಗುವಂತೆ ಬಾಳಿ,ಜನರು ನಿಮ್ಮನ್ನು ನೆನಸಿಕೊಳ್ಳುತ್ತಾರೆ. ಜನರ ಶಾಪಕ್ಕೆ ಗುರಿಯಾಗಬೇಡಿ ಎಂದು ಗೃಹ ಸಚಿವರಿಗೆ ನೇರ ಎಚ್ಚರಿಕೆ ನೀಡಿದರು.

ವೈದ್ಯರಾದ ಡಾ.ಲಕ್ಷ್ಮಿಕಾಂತ ಮಾತನಾಡಿ, ಒಳಮೀಸಲಾತಿ ಬಗ್ಗೆ ಕಾಂಗ್ರೆಸ್ ಪಕ್ಷದ ನಾಟಕ ಬಯಲಾಗಿದೆ. ಅಸ್ಪøಷ್ಯರ ಬಳಿ ಒಂದುರೀತಿ, ಸ್ಪರ್ಷರ ಬಳಿ ಮತ್ತೊಂದುರೀತಿ ಮಾತನಾಡುವ ಮೂಲಕ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.ನಿಮ್ಮ ಈ ಇಬ್ಬಂದಿತನ ಹೆಚ್ಚು ದಿನ ನಡೆಯುವುದಿಲ್ಲ.ಕೂಡಲೇ ಒಳಮೀಸಲಾತಿ ಜಾರಿಗೆತನ್ನಿಎಂದು ಆಗ್ರಹಿಸಿದರು.

ಹೋರಾಟಗಾರರಾದ ರಾಜಸಿಂಹ, ಪಿ.ಎನ್.ರಾಮಯ್ಯ, ನರಸಿಂಹಮೂರ್ತಿ,ರಮೇಶ್,ದಾಡಿ ವೆಂಕಟೇಶ್, ಹೊಸಕೋಟೆ ನಟರಾಜು, ಬಿ.ಜಿ.ಸಾಗರ್, ಸೋರೆಕುಂಟೆ ಯೋಗೀಶ್, ಸಣ್ಣಭೂತಣ್ಣ, ಕೇಬಲ್ ರಘು, ಟಿ.ಡಿ.ಮೂರ್ತಿ,ವಕೀಲ ರಂಗಧಾಮಯ್ಯ ಸೇರಿದಂತೆ ನೂರಾರುಜನರು ಪಾಲ್ಗೊಂಡಿದ್ದರು,

Leave a Reply

Your email address will not be published. Required fields are marked *