
ತುಮಕೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ವತಿಯಿಂದ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿಗಳ ಪ್ರಧಾನ, ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ, ಕ್ಷೇಮಾಭಿವೃದ್ಧಿ ನಿಧಿಗೆ ದೇಣಿಗೆ ನೀಡಿದವರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮವನ್ನು ನವೆಂಬರ್ 11 ರಂದು ಬೆಳಿಗ್ಗೆ 10.30ಗಂಟೆಗೆ ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಅವರು ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡುವರು. ಸಹಕಾರ ಸಚಿವರ ಕೆ.ಎನ್. ರಾಜಣ್ಣ ಅವರು ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುವರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಹಿರಿಯ ಪತ್ರಕರ್ತರಿಗೆ ಸನ್ಮಾನಿಸುವರು. ಕೆಯುಡಬ್ಲೂö್ಯಜೆ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಅಧ್ಯಕ್ಷತೆ ವಹಿಸುವರು. ಕೆಯುಡಬ್ಲೂö್ಯಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಗೌರವ ಉಪಸ್ಥಿತಿಯಲ್ಲಿ ಜಿಲ್ಲೆಯ ವಿವಿಧ ಅಧಿಕಾರಿಗಳು, ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವರು.