ತುಮಕೂರು:ಕರ್ನಾಟಕದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ರಾಜ್ಯಮಟ್ಟದ ಮಹಾಧಿವೇಶನ ಅಕ್ಟೋಬರ್ 05ರ ಶನಿವಾರ ಮತ್ತು ಅಕ್ಟೋಬರ್ ಭಾನುವಾರ ನಗರದ ಏಂಪ್ರೆಸ್ ಕೆಪಿಎಸ್‍ಶಾಲೆಯ ಸಭಾಂಗಣದಲ್ಲಿ ಜರುಗಲಿದೆ ಎಂದು ಸಮಿತಿಯ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಸಂವಿಧಾನದ ನಿಯಮದ ಪ್ರಕಾರ ಪ್ರತಿ ಮೂರು ವರ್ಷಗಳಿಗೊಮ್ಮೆ ಸರ್ವ ಸದಸ್ಯರ ಸಭೆ ನಡೆಸುವುದು ಕಡ್ಡಾಯ. ಹಿನ್ನೆಲೆಯಲ್ಲಿ ಅಕ್ಟೋಬರ್ 05-06 ರಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರು,ಸಂಘಟನಾ ಸಂಚಾಲಕರು,ಪÀದಾಧಿಕಾರಿಗಳು,ತಾಲೂಕು ಪದಾಧಿüಕಾರಿಗಳ ಮಹಾಧೀವೇಶವನ್ನು ಆಯೋಜಿಸ ಲಾಗುತ್ತಿದೆ.ಸÀುಮಾರು 600 ಜನರು ರಾಜ್ಯದ ವಿವಿಧ ಮೂಲೆಗಳಿಂದ ತುಮಕೂರಿಗೆ ಆಗಮಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರೊ.ಬಿ.ಕೃಷ್ಣಪ್ಪ ಅವರು ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗಾಗಿ ದಲಿತ ಸಂಘರ್ಘ ಸಮಿತಿ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದೆ.ಇತ್ತೀಚಿನ ಸಾಮಾಜಿಕ, ಆರ್ಥಿಕ ಅಸಮಾನತೆಯ ಜೊತೆಗೆ, ಕೋಮುವಾದಿಕರಣವೂ ರಾಜ್ಯವನ್ನು ಕಿತ್ತು ತಿನ್ನುತಿದ್ದು,ಸಂವಿಧಾನಕ್ಕೆ,ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತಿರುವ ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಯಾವ ರೀತಿಯ ಹೆಜ್ಜೆಗಳನ್ನೀಡಬೇಕು.ದÀಲಿತ ಸಂಘರ್ಷ ಸಮಿತಿಯ ಮುಂದಿರುವ ಆಯ್ಕೆಗಳೇನು ಎಂಬ ವಿಚಾರವಾಗಿ ಚರ್ಚಿಸುವ ನಿಟ್ಟಿನಲ್ಲಿ ಈ ಸರ್ವಸದಸ್ಯರ ಮಹಾಧೀವೇಶನ ಮಹತ್ವದ ಹೆಜ್ಜೆಯಾಗಿದೆ.ಯುವಜನರಿಗೆ ಹೆಚ್ಚಿನ ಅದ್ಯತೆ ನೀಡಲಾಗುತ್ತಿದೆ ಎಂದರು.
ಅಕ್ಟೋಬರ್ 05ರಂದು ನಡೆಯುವ ದಲಿತ ಸಂಘರ್ಷ ಸಮಿತಿಯ ಮಹಾಧೀವೇಶನವನ್ನು ಬಂಡಾಯ ಸಾಹಿತಿ ನಾಡೋಜ ಬರಗೂರ ರಾಮಚಂದ್ರಪ್ಪ ಅವರು ಉದ್ಘಾಟಿಸಲಿದ್ದು,ಸಹಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ,ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್,ಇಂದಿರಾ ಕೃಷ್ಣಪ್ಪ,ನಟರಾಜ್ ಬೂದಾಳ್, ಜಿ.ವಿ.ಆನಂದಮೂರ್ತಿ, ಕೆ.ದೊರೆರಾಜು ಮತ್ತಿತರರ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಮಾವಳ್ಳಿ ಶಂಕರ್ ತಿಳಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದದ ತುಮಕೂರು ಜಿಲ್ಲಾಧ್ಯಕ್ಷ ಕುಂದೂರು ತಿಮ್ಮಯ್ಯ ಮಾತನಾಡಿ, ರಾಜ್ಯದ ಚಳವಳಿಗಳಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ಹೋರಾಟ ರೋಚಕವಾದುದ್ದು,ಹಲವಾರು ನಾಯಕರು ಚಳವಳಿಯ ರಥ ಎಳೆದಿದ್ದಾರೆ.ಅವುಗಳನ್ನು ಮೆಲುಕು ಹಾಕುವ ಜೊತೆಗೆ,ವÀುುಂದೇನು ಎಂಬ ಪ್ರಶ್ನೆಗೂ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಮಹಾಧೀವೇಶನ ಮಹತ್ವ ಪಡೆದಿದೆ.ರಾಜ್ಯದ ವಿವಿಧೆಡೆಗಳಿಂದ ಸುಮಾರು 400 ಜನರು ಭಾಗವಹಿಸಲಿದ್ದು, ಜಿಲ್ಲೆಯಿಂದ 200 ಜನರು ಪಾಲ್ಗೊಳ್ಳಲಿದ್ದಾರೆ. ಹೊರಗಿನಿಂದ ಬರುವ ಕಾರ್ಯಕರ್ತರಿಗೆ ಏಂಪ್ರೆಸ್ ಶಾಲೆಯಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆÉ.ಎರಡು ದಿನವೂ ಊಟ, ತಿಂಡಿ ವ್ಯವಸ್ಥೆಯಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಚೇಳೂರು ಶಿವನಂಜಪ್ಪ, ವಿರೂಪಾಕ್ಷ ಡ್ಯಾಗೇರಹಳ್ಳಿ, ಮುರುಳಿ ಕುಂದೂರು, ಶ್ರೀನಿವಾಸ್,ತಾಯಪ್ಪ,ನಾಗಣ್ಣ ಬಡಿಗೇರ್,ವೀರೇಶ್ ಹಿರೇಹಳ್ಳಿ,ಡಾ.ಮಹೇಶ್, ಸಿದ್ದಪ್ಪ ಕಾಂಬ್ಳೆ ಮತ್ತಿತರರು ಪಾಲ್ಗೊಂಡಿದ್ದರು.