ತುಮಕೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಒಳಮೀಸಲಾತಿ ಕಲ್ಪಿಸಬಹುದು ಎಂದು ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪಿನ ಕುರಿತಂತೆ ಆದಿಜಾಂಭವ ಮಹಾಮೈತ್ರಿ, ಕರ್ನಾಟಕ ರಾಜ್ಯ ಎಸ್ಸಿಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿ, ಸಹಕಾರದೊಂದಿಗೆ ಇಂದು ಸಂವಾದವನ್ನು ಏರ್ಪಡಿಸಲಾಗಿದೆ.
ನಗರದ ಸಮೃದ್ಧಿ ಗ್ರ್ಯಾಂಡ್ ಹೋಟೇಲ್ನಲ್ಲಿ ಸಂಜೆ 4.00ಕ್ಕೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಕೆ.ದೊರೈರಾಜು ವಹಿಸಿಕೊಳ್ಳಲಿದ್ದು, ಹೈಕೋರ್ಟ್ ವಕೀಲರಾದ ಹೆಚ್.ವಿ.ಮಂಜುನಾಥ್, ಜಗದೀಶ್ ಅವರು ವಿಷಯ ಮಂಡನೆ ಮಾಡಲಿದ್ದಾರೆ. ವಕೀಲರಾದ ಮರಿಚೆನ್ನಮ್ಮ, ವೆಂಕಟೇಶ್, ರಂಗಧಾಮಯ್ಯ, ಗೋವಿಂದರಾಜು ಇತರರು ಉಪಸ್ಥಿತರಿರಲಿದ್ದಾರೆ.
ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಜಿ.ಪಂ.ಮಾಜಿ ಸದಸ್ಯ ಕೆಂಚಮಾರಯ್ಯ, ವೈ.ಎಚ್.ಹುಚ್ಚಯ್ಯ, ಕುಂದೂರು ತಿಮ್ಮಯ್ಯ, ದೊಡ್ಡೇರಿ ಕಣಿಮಯ್ಯ, ಡಾ.ಲಕ್ಷ್ಮೀಕಾಂತ್, ಡಾ.ಅರುಂಧತಿ, ಕೊಟ್ಟಶಂಕರ್, ರಾಜಸಿಂಹ, ಶಿವಶಂಕರ್ ಸೇರಿದಂತೆ ಜಿಲ್ಲೆಯ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.
ಸಂವಾದದಲ್ಲಿ ದಲಿತ ಸಂಘಟನೆಗಳ ಮುಖಂಡರು, ಸದಸ್ಯರು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಸಂಚಾಲಕರುಗಳಾದ ಕೈಗಾರಿಕೋದ್ಯಮಿ ಡಿ.ಟಿ.ವೆಂಕಟೇಶ್, ನರಸೀಯಪ್ಪ, ಡಾ.ಬಸವರಾಜು, ಡಾ.ವೈ.ಕೆ.ಬಾಲಕೃಷ್ಣಪ್ಪ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.