ಡಿಸೆಂಬರ್ 6ಕ್ಕೆ ಸಿದ್ಧಾರ್ಥ ಎಂಜನಿಯರಿಂಗ್ ಕಾಲೇಜಿನಲ್ಲಿ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಫರ್ಧೆ

ತುಮಕೂರು: ನಗರದ ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್ (ಸಾಹೇ) ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗ ವತಿಯಿಂದ ಶಿಕ್ಷಣ ಭೀಷ್ಮ ದಿವಂಗತ ಎಚ್ ಎಂ ಗಂಗಾಧರಯ್ಯನವರ 37ನೇ ವರ್ಷದ ಸ್ಮರಣಾರ್ಥ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಡಿಸೆಂಬರ್ 6ರಂದು ನಗರದ ಎಸ್‍ಎಸ್‍ಐಟಿ ಕ್ಯಾಂಪಸ್‍ನಲ್ಲಿ ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ.

ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆಯ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಗೃಹ ಸಚಿವರು ಹಾಗೂ ಸಾಹೇ ಕುಲಾಧಿಪತಿಗಳಾದ ಸವ್ಯಸಾಚಿ ಡಾ ಜಿ ಪರಮೇಶ್ವರ ಅವರು ಉದ್ಘಾಟಿಸಲಿದ್ದಾರೆ. ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಚಿತ್ರಕಲಾವಿದರಾದ ಡಾ.ಸುರೇಶ್ ಬಾಬು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಕನ್ನಿಕಾ ಪರಮೇಶ್ವರಿ ಅವರು ಅತಿಥಿಗಳಾಗಿ ಆಗಮಿಸಲಿದ್ದು, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎಂ ಎಸ್ ರವಿಪ್ರಕಾಶ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಸಾಹೇ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ, ಕುಲಸಚಿವರಾದ ಡಾ.ಅಶೋಕ್ ಮೆಹತಾ, ಪರೀಕ್ಷಾಂಗ ವಿಭಾಗದ ನಿಯಂತ್ರಕರಾದ ಡಾ.ಗುರುಶಂಕರ್.ಸಿ, ಕುಲಾಧಿಪತಿಗಳ ಸಲಹೆಗಾರರಾದ ವಿವೇಕ ವೀರಯ್ಯ, ಎಸ್‍ಎಸ್‍ಐಟಿಯ ಡೀನ್ (ಅಕಾಡೆಮಿಕ್) ಡಾ ರೇಣುಕಾಲತಾ ಎಸ್, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಎಲ್ಲಾ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು ಮತ್ತು ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆ. ತುಮಕೂರು ಜಿಲ್ಲೆ ಮತ್ತು ನಗರದ 100ಕ್ಕೂ ಹೆಚ್ಚು ಶಾಲೆಗಳಿಂದ ಸುಮಾರು 5 ಸಾವಿರ ಶಾಲಾ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಹಾಗೂ ಸ್ಪರ್ಧೆಯ ಸಂಯೋಜಕರಾದ ಡಾ.ಸಹನಾ ಟಿ.ಎಸ್. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *