ತುಮಕೂರು : ಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರು 2023-24ನೇ ಸಾಲಿನ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಏಪ್ರಿಲ್ 1 ರಿಂದ 30ರೊಳಗಾಗಿ ತಮ್ಮ ಆಸ್ತಿ ತೆರಿಗೆ ಪಾವತಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ ಸೌಲಭ್ಯ ನೀಡಲಾಗುವುದು ಎಂದು ಪಾಲಿಕೆ ಆಯುಕ್ತ ದರ್ಶನ್ ತಿಳಿಸಿದ್ದಾರೆ.

ದಂಡ ರಹಿತವಾಗಿ ಆಸ್ತಿ ತೆರಿಗೆ ಪಾವತಿಸುವವರಿಗೆ ಜೂನ್ 30ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜುಲೈ 1 ರಿಂದ ಆಸ್ತಿ ತೆರಿಗೆ ಪಾವತಿಸಿದಲ್ಲಿ ಪ್ರತಿ ಮಾಹೆಗೆ ಶೇ.2ರಷ್ಟು ದಂಡ ವಿಧಿಸಲಾಗುತ್ತದೆ. ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಜೂನ್ ಮಾಹೆಯೊಳಗಾಗಿ ಆಸ್ತಿ ತೆರಿಗೆ ಪಾವತಿಸಿ ತುಮಕೂರು ನಗರದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.