ಮಕ್ಕಳಂತೆ ಮರಗಿಡಗಳನ್ನು ಬೆಳೆಸಿ: ಸದ್ರುಲ್ಲಾ ಷರೀಫ್

ತುಮಕೂರು: ಉತ್ತಮ ಪರಿಸರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮಕ್ಕಳಂತೆ ಮರಗಿಡಗಳನ್ನು ಬೆಳೆಸಬೇಕು ಎಂದು ಹಿರಿಯ ಮೋಟಾರು ವಾಹನ ನಿರೀಕ್ಷಕ ಸದ್ರುಲ್ಲಾ ಷರೀಫ್ ತಿಳಿಸಿದರು.

ನಗರದ ಆರ್‍ಟಿಒ ಕಚೇರಿ ಆವರಣದಲ್ಲಿ ಸಾರಿಗೆ ಇಲಾಖೆ ಮತ್ತು ತುಮಕೂರು ಜಿಲ್ಲಾ ಮೋಟಾರು ವಾಹನ ತರಬೇತಿ ಶಾಲೆಗಳ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಆರೋಗ್ಯವನ್ನು ನೀಡಬೇಕೆಂದರೆ ಮರಗಿಡಗಳನ್ನು ಬೆಳೆಸುವಂತೆ ಕರೆ ನೀಡಿದರು.
ಪರಿಸರದಲ್ಲಿ ಆಮ್ಲಜನಕದ ಪ್ರಮಾಣವನ್ನು ಸಮತೋಲವನ್ನು ಕಾಪಾಡಿಕೊಳ್ಳಲು ಮರಗಿಡಗಳನ್ನು ಬೆಳೆಸದೇ ಹೋದರೆ ಆಮ್ಲಜನಕಕ್ಕಾಗಿ ಲಕ್ಷಾಂತರ ರೂಪಾಯಿಯನ್ನು ವ್ಯಯಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ ಎನ್ನುವುದನ್ನು ಅರಿತು ಮರಗಿಡಗಳನ್ನು ಬೆಳೆಸುವಂತೆ ತಿಳಿಸಿದರು.

ಜಿಲ್ಲಾ ಮೋಟಾರು ವಾಹನ ತರಬೇತಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಮರಗಿಡ ಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಕಾಪಾಡಬೇಕಾದ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ, ಯಾವುದೇ ಪ್ರತಿಫಲಾಕ್ಷೇ ಇಲ್ಲದೆ ಮರಗಿಡಗಳನ್ನು ಬೆಳೆಸಿದ ಸಾಲುಮರದ ತಿಮ್ಮಕ್ಕ ನಮಗೆ ಮಾದರಿಯಾಗ ಬೇಕು ಎಂದರು.

ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಗೆ ಆಗಮಿಸಿದ್ದ ಸಾರ್ವಜನಿಕರಿಗೆ ಸಸಿಗಳನ್ನು ಉಚಿತವಾಗಿ ನೀಡಲಾ ಯಿತು. ಒಕ್ಕೂಟದ ಕಾರ್ಯದರ್ಶಿ ಬಸವರಾಜು, ಖಜಾಂಚಿ ನಾಗೇಶಣ್ಣ, ಸುರೇಶ್, ಹಬೀಬುರ್ ರೆಹಮಾನ್ ಸೇರಿದಂತೆ ಇತರರಿದ್ದರು.

Leave a Reply

Your email address will not be published. Required fields are marked *