ತುಮಕೂರು : ಕನ್ನಡ ನಾಡಿನ ವರನಟ, ಪದ್ಮಭೂಷಣ, ನಟ ಸಾರ್ವಭೌಮ ಡಾ: ರಾಜ್‍ಕುಮಾರ್ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಡಾ: ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಏಪ್ರಿಲ್ 24ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕನ್ನಡಭವನದಲ್ಲಿ “ರಾಜರಸ” ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಕಲಾವಿದರು, ಡಾಃ ರಾಜ್ ಅಭಿಮಾನಿಗಳು ಸೇರಿದಂತೆ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ಮನವಿ ಮಾಡಿದ್ದಾರೆ.