ತುಮಕೂರು : ಡಿಸೆಂಬರ್ 2ರಂದು ಮುಖ್ಯಮಂತ್ರಿಗಳು ನಗರಕ್ಕೆ ಭೇಟಿ ಸಂದರ್ಭದಲ್ಲಿ ಜಿಲ್ಲೆಯ ಮಧುಗಿರಿ-ಕೊರಟಗೆರೆ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮನವಿ ಮಾಡಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 24ರಂದು ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟದ ಅಂಗವಾಗಿ ಹಮ್ಮಿಕೊಂಡಿರುವ ಕ್ರೀಡಾ ಜ್ಯೋತಿಗೆ ಚಾಲನೆ ನೀಡಿ ಮಾತನಾಡಿದ ಅವರು
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಕ್ರೀಡಾ ಜ್ಯೋತಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು ಪ್ರತಿಯೊಬ್ಬ ಪತ್ರಕರ್ತರಲ್ಲೂ ಕ್ರೀಡಾ ಮನೋಭಾವನೆ ಮೂಡಬೇಕು. ಶಾಂತಿಯ ಸಂದೇಶ ಸಾರುವ ಸಲುವಾಗಿ ಜಿಲ್ಲೆಯಾದ್ಯಂತ ಕ್ರೀಡಾಜ್ಯೋತಿ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾ ಜ್ಯೋತಿಯು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಸಂಚರಿಸಿ ಸಮಾಜದಲ್ಲಿ ಶಾಂತಿ ಮತ್ತು ಸಹೋದರತ್ವ ಭಾವನೆಯಿಂದ ಬಾಳಬೇಕು ಎಂಬ ಸಂದೇಶ ಸಾರಲಿದೆ ಎಂದು ತಿಳಿಸಿದರು.
ಪತ್ರಕರ್ತರು ಮುಖ್ಯಮಂತ್ರಿ ಭೇಟಿ ಬಗ್ಗೆ ಮಾಹಿತಿ ಕೇಳಿದಾಗ ಉತ್ತರಿಸಿದ ಅವರು ತುಮಕೂರು ಬೆಂಗಳೂರಿನಂತೆ ಬಹಳ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಮುಂದಿನ ದಿನಗಳಲ್ಲಿ ತುಮಕೂರು ಬೆಂಗಳೂರಿನ ಒಂದು ಭಾಗವಾಗಬೇಕೆಂಬ ಆಕಾಂಕ್ಷೆಯಿದೆ ಎಂದರು.
ನಾನೂ ಒಬ್ಬ ಕ್ರೀಡಾಪಟುವಾಗಿ ಕ್ರೀಡಾ ಜ್ಯೋತಿಗೆ ಚಾಲನೆ ನೀಡಿರುವುದು ಸಂತೋಷ ತಂದಿದೆ. ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿದರು.
ಕ್ರೀಡಾ ಜ್ಯೋತಿಯು ನವೆಂಬರ್ 21 ರಿಂದ 23ರವರೆಗೆ ಜಿಲ್ಲಾದ್ಯಂತ ಎಲ್ಲ ತಾಲೂಕುಗಳಲ್ಲೂ ಸಂಚರಿಸಲಿದ್ದು, 21ರಂದು ತುಮಕೂರು, ಕುಣಿಗಲ್ ಪಟ್ಟಣ, ಯಡಿಯೂರು, ಮಾಯಸಂದ್ರ, ನೊಣವಿನಕೆರೆ, ತಿಪಟೂರು ನಗರ, ಕೆ.ಬಿ.ಕ್ರಾಸ್, ಗುಬ್ಬಿ ಪಟ್ಟಣದಲ್ಲಿ ಕ್ರೀಡಾ ಜ್ಯೋತಿ ಸಂಚರಿಸಿತು.
ಕ್ರೀಡಾ ಜ್ಯೋತಿಯು ನವೆಂಬರ್ 22ರ ಬೆಳಿಗ್ಗೆ ಗುಬ್ಬಿ, ಕೆ.ಬಿ. ಕ್ರಾಸ್ ಮೂಲಕ ಚಿಕ್ಕನಾಯಕನಹಳ್ಳಿ ತಾಲೂಕು, ಶಿರಾ ನಗರ, ಮಧುಗಿರಿ ಮೂಲಕ ಪಾವಗಡ ಪಟ್ಟಣ ತಲುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದ್ದು, ನವೆಂಬರ್ 23ರ ಶನಿವಾರ ಪಾವಗಡ ಪಟ್ಟಣದಲ್ಲಿ ಸಂಚರಿಸಿ ಮಿಡಿಗೇಶಿ ತಲುಪಲಿದೆ. ಮಿಡಿಗೇಶಿಯಿಂದ ಮಧುಗಿರಿ, ಕೊರಟಗೆರೆ ಪಟ್ಟಣಕ್ಕೆ ತಲುಪುವ ಕ್ರೀಡಾ ಜ್ಯೋತಿಯು ಕೊರಟಗೆರೆಯಿಂದ ತುಮಕೂರು ತಲುಪಲಿದೆ.
ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಸಚಿವ ಪರಮೇಶ್ವರ್ ಅವರ ಧರ್ಮಪತ್ನಿ ಕನ್ನಿಕಾ ಪರಮೇಶ್ವರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ, ಪ್ರಭು, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಅಶೋಕ್ ಕೆ.ವಿ., ಪಾಲಿಕೆ ಆಯುಕ್ತ ಬಿ.ವಿ. ಆಶ್ವಿಜ, ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ: ವೆಂಕಟೇಶ್ವರಲು, ಹಿರಿಯ ಪತ್ರಕರ್ತರಾದ ಎಸ್. ನಾಗಣ್ಣ, ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ರಘುರಾಮ್, ಕ್ರೀಡಾಕೂಟದ ಪ್ರಚಾರ ಸಮಿತಿ ಅಧ್ಯಕ್ಷ ರಂಗರಾಜು, ಟಿ.ಎನ್. ಮಧುಕರ್, ಶಾಂತರಾಜು, ಡಿ.ಎಂ.ಸತೀಶ್, ಕ್ರೀಡಾ ಸಮಿತಿ ಸಂಚಾಲಕ ಸತೀಶ್ ಹಾರೋಗೆರೆ, ಯಶಸ್, ಹರೀಶ್ ಆಚಾರ್ಯ ಸೇರಿದಂತೆ ಜಿಲ್ಲೆಯ ಪತ್ರಕರ್ತರು ಭಾಗವಹಿಸಿದ್ದರು.