ತುಮಕೂರು : ತುಮಕೂರು ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಈ ಬಾರಿಯ ಬಜೆಟ್‍ನಲ್ಲಿ ಹೆಚ್ಚು ಹಣ ನೀಡುವಂತೆ ಕೆಪಿಸಿಸಿ ಉಪಾಧ್ಯಕ್ಷರಾದ ಮುರಳೀಧರ ಹಾಲಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಮುರಳೀಧರ ಹಾಲಪ್ಪನವರು ಪ್ರಮುಖ ನೀರಾವರಿ ಯೋಜನೆಗಳಾದ ಭದ್ರಾ ಮೇಲ್ದಂಡೆ. ಹೇಮಾವತಿ ಹಾಗೂ ಎತ್ತಿನಹೊಳೆ ಯೋಜನೆಯ ಕಾಮಗಾರಿಗಳಿಗೆ ಹೆಚ್ಚಿನ ಮೊತ್ತವನ್ನು ಮಂಜೂರು ಮಾಡಲು ಮನವಿ ಮಾಡಿದ್ದಾರೆ.
ಹುಣಸೆ, ಮಾವು, ನೇರಳೆ, ಹಲಸು ಇವುಗಳನ್ನು ಒಳಗೊಂಡಂತೆ ಸುಮಾರು 500 ಎಕರೆ ವಿಸ್ತೀರ್ಣದಲ್ಲಿ ಆಗೋ ಪಾರ್ಕ್ ಮಾಡುವ ಮೂಲಕ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾರಾಟ ಕೇಂದ್ರ ಸಂಶೋಧನಾ ಕೇಂದ್ರ-ತರಬೇತಿ ವಿಭಾಗ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.