ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ : ಗೃಹ ಸಚಿವ .ಡಾ.ಜಿ.ಪರಮೇಶ್ವರ್

ಶಿರಾ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ನಿಗದಿತ ಕಾಲಮಿತಿಯೊಳಗಾಗಿ ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಿ ಕೆಲಸ ಮಾಡಬೇಕು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು  ಶಿರಾ ತಾಲೂಕಿನ ಮಿನಿ ವಿಧಾನಸೌಧದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ‘ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತ ಸಭೆ’ಯನ್ನುದ್ದೇಶಿಸಿ ಮಾತನಾಡಿದ ಅವರು,   ಸಾರ್ವಜನಿಕರ ಸಮಸ್ಯೆಗಳಿಗೆ  ಸ್ಪಂದಿಸಿ  ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

ಶಿರಾ ತಾಲೂಕಿಗೆ ಸಂಬಂಧಿಸಿದ ಕೃಷಿ, ತೋಟಗಾರಿಕೆ, ಸಣ್ಣ ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಿ  ವಿವಿಧ ಅಧಿಕಾರಿಗಳಿಂದ  ಪ್ರಗತಿ ವರದಿ ಪಡೆದು ಮಾತನಾಡಿದ ಅವರು, ಬರ ಪರಿಸ್ಥಿತಿಯ ನಿರ್ವಹಣೆಗಾಗಿ ಎಲ್ಲಾ ಜಿಲ್ಲೆಗಳಿಗೂ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಜಿಲ್ಲೆಗೆ 15 ಕೋಟಿ ರೂ. ಬಿಡುಗಡೆ ಮಾಡಲಾಗಿದೆ, ಸರ್ಕಾರದಲ್ಲಿ  ಹಣದ ಕೊರತೆ ಇಲ್ಲ ಎಂದರು.

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಂದಿನ ಜನವರಿ ನಂತರದ ನಾಲ್ಕು ಮಾಹೆಗಳಲ್ಲಿ ಕುಡಿಯುವ ನೀರು ಹಾಗೂ ಪಶುಗಳಿಗೆ ಮೇವಿನ ತೊಂದರೆಯಾಗದಂತೆ ಬರನಿರ್ವಹಣೆ ಮಾಡುವ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಶಾಸಕರಾದ ಟಿ.ಬಿ. ಜಯಚಂದ್ರ ಮಾತನಾಡಿ, ಶಿರಾ ತಾಲೂಕಿನಲ್ಲಿ ರಾಸುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ನೀರಿರುವ ಕೆರೆಗಳ ಸದ್ಬಳಕೆ ಮಾಡಿಕೊಂಡು, ಪಶುಗಳಿಗಾಗಿ ಮೇವುಗಳನ್ನು ಬೆಳೆಸಿ, ಮುಂದಿನ ಬೇಸಿಗೆಯಲ್ಲಿ ಪಶುಗಳಿಗೆ ಮೇವು ಕೊರತೆಯಾಗದಂತೆ ವಿವಿಧ ಹಂತಗಳಲ್ಲಿ ಮೇವು ಸಂಗ್ರಹಿಸಬೇಕು ಎಂದರು.

 ತಾಲ್ಲೂಕಿನಲ್ಲಿ 270 ಆರ್.ಓ ಪ್ಲಾಂಟ್‍ಗಳಿದ್ದು,  ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಸಮಗ್ರ ನಿರ್ವಹಣೆ  ಮಾಡಿ ಕ್ರಮವಹಿಸುವಂತೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ  ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು,  ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ  ಸೇರಿದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದ್ದು, ದುರಸ್ತಿಗೆ ಬಂದಿರುವ ಖಾಸಗಿ ಘಟಕಗಳನ್ನು ಸಹ ಸರಿಪಡಿಸಲು ಕ್ರಮವಹಿಸಲಾಗುತ್ತಿದೆ ಎಂದ ಅವರು, 500 ಕೋಟಿ ವೆಚ್ಚದ ನರೇಗಾ ವೈಯಕ್ತಿಕ ಹಾಗೂ ಸಮುದಾಯ  ಕಾಮಗಾರಿಗಳನ್ನು ಅನುμÁ್ಟನಗೊಳಿಸಲಾಗುತ್ತಿದೆ ಎಂದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 300  ರಿಂದ 500 ಜನ ಹಾಗೂ ಪ್ರತಿ ರೈತನಿಗೆ 30 ರಿಂದ 50ಸಾವಿರದ ವರೆಗಿನ ಕಾಮಗಾರಿಯಂತೆ ಜಿಲ್ಲೆಯ ಒಂದು ಲಕ್ಷ ರೈತರನ್ನು ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗಿದೆ, ಮುಂದುವರೆದು, ಅಂಗನವಾಡಿ ಶಾಲೆ, ಆಸ್ಪತ್ರೆ, ಇತರೆ ಸರ್ಕಾರಿ ಕಟ್ಟಡ, ರಸ್ತೆ ಮೊದಲಾದ ಸಮುದಾಯ ಆಧಾರಿತ ಕಾಮಗಾರಿಗಳ ಅನುμÁ್ಟನಗೊಳಿಸಲಾಗುತ್ತಿದೆ ಎಂದರು.

 ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ,  ಉಪವಿಭಾಗಾಧಿಕಾರಿ ರಿಷಿ ಆನಂದ್, ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *