ತುಮಕೂರು: ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರಿಂದು ವಿಧಾನ ಸಭಾ ಅಧ್ಯಕ್ಷರಾದ ವಿಶ್ವೇಶ್ವರ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ರಾಜೀನಾಮೆ ಪತ್ರದಲ್ಲಿ ನಾನು ವೈಯಕ್ತಿಕವಾಗಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯ ಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯುತ್ತಿದ್ದು, ಈ ಸಭೆ ಮುಗಿದ ಕೂಡಲೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ಶಾಸಕರ ಆಪ್ತ ವಲಯ ತಿಳಿಸಿದೆ.