ತುಮಕೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ತುಮಕೂರು ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ ಎಂದು ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷರಾದ ಎನ್. ಮಂಜಪ್ಪ ಹೇಳಿದರು.
ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮಾಜವಾದಿ ಪಕ್ಷದಿಂದ ರಾಜ್ಯದಲ್ಲಿ 39 ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದು, ಅದರಲ್ಲಿ ತುಮಕೂರ ಮತ್ತು ಕೊರಟಗೆರೆ ಕ್ಷೇತ್ರÀ್ರದಲ್ಲಿ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.
ಕೊರಟಗೆರೆಯಿಂದ ವಕೀಲರಾದ ಎನ್.ಹನುಮಯ್ಯ, ತುಮಕೂರು ಕ್ಷೇತ್ರದಿಂದ ಪ್ರಮೋದ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದರು.
ಸಧ್ಯಕ್ಕೆ ಜಿಲ್ಲೆಯ ಹನ್ನೊಂದು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದಿಂದ ಅಭ್ಯರ್ಥಿಗಳು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ, ರಾಜ್ಯದ ವಿಧಾನ ಸಭಾ ಚುನಾವಣೆಗೆ ಪಕ್ಷದಿಂದ ಈಗಾಗಲೇ ತಯಾರಿ ನಡೆಸಿದ್ದು, ರಾಜ್ಯದ 224 ಕ್ಷೇತ್ರಗಳ ಪೈಕಿ 39 ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಇರುತ್ತಾರೆ ಎಂದರು.
ಗುಜರಾತ್ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 5 ಸ್ಥಾನ ದಲ್ಲಿ ಸ್ಪರ್ಧಿಸಿತ್ತು.ಅದರಲ್ಲಿ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು , ಎರಡು ಕ್ಷೇತ್ರದಲ್ಲಿ ಕಡಿಮೆ ಅಂತರದಲ್ಲಿ ಸೋತಿದೆ. ಈ ಚಿತ್ರಣದಿಂದ ಜನತೆ ನಮ್ಮ ಪಕ್ಷದತ್ತ ಮುಖಮಾಡಿದ್ದಾರೆ ಎಂಬುದು ಗೊತ್ತಾಗಿದೆ ಎಂದರು.
ರಾಜ್ಯಾದ್ಯAತ ಪಕ್ಷದ ಜಿಲ್ಲಾ ಸಮಿತಿ ರಚನೆ ಯಾಗಿದೆ.ಪಕ್ಷದ ಸಿದ್ದಾಂತದಡಿ ಸದಸ್ಯತ್ವ ನೀಡಲಾಗಿದೆ. ಸಮಾಜವಾದಿ ಶಕ್ತಿ ಇರುವ ಕ್ಷೇತ್ರದಲ್ಲಿ ಸ್ಪರ್ಧಿಸಲು ಬೇರೆ ಪಕ್ಷದಿಂದ ಬಂದವರು ಟಿಕೆಟ್ ಕೇಳ ಬಯಸಿದ್ದಾರೆ ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ 40℅ ಕಮಿಷನ್ ಸರ್ಕಾರ ಪಡೆದುಕೊಳ್ಳುತ್ತಿರುವುದು ನಾಚಿಕೆಗೇಡು. ಈ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸಲು ಹಾಗೂ ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆಯಲು ಜನವರಿ ತಿಂಗಳಲ್ಲಿ ಸಮಾಜವಾದಿ ಪಕ್ಷದಿಂದ ಸೈಕಲ್ ರ‍್ಯಾಲಿ ಏರ್ಪಡಿಸಲಾಗಿದೆ ಎಂದರು. ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ಪ್ರಾಮಾಣಿಕವಾಗಿ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷರಾದ ಪರಮೇಶ್ವರ್, ಲಕ್ಷಿö್ಮÃಕಾಂತ್, ಈಶ್ವರ್, ಚಂದ್ರಣ್ಣ ಮುಂತಾದವರಿದ್ದರು.