ತುಮಕೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇನತರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ಸೆಪ್ಟೆಂಬರ್ 3ರಂದು ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಮಧ್ಯಾಹ್ನ 1.30ಕ್ಕೆ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ, 2 ಗಂಟೆಗೆ ಸದಾಶಿವನಗರದಲ್ಲಿರುವ ಮಹಿಳಾ ಸ್ವೀಕಾರ ಕೇಂದ್ರಕ್ಕೆ ಭೇಟಿ ಹಾಗೂ ಪರಿಶೀಲನೆ, 2.30 ಗಂಟೆಗೆ ಸದಾಶಿವನಗರದಲ್ಲಿನ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ಹಾಗೂ ಪರಿಶೀಲನೆ, 3 ಗಂಟೆಗೆ ತುಮಕೂರು ತಾಲ್ಲೂಕು ಗೂಳೂರು ಗ್ರಾಮದ ಎಂ.ಎಸ್.ಪಿ.ಸಿ. ಘಟಕಕ್ಕೆ ಭೇಟಿ ಹಾಗೂ ಪರಿಶೀಲನೆ ನಡೆಸಿ ನಂತರ ಸಂಜೆ 6 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.