ತುಮಕೂರು : ನಗರದ ಶಿರಾ ರಸ್ತೆಯ ಶ್ರೀ ದುರ್ಗಾಂಬಿಕಾ ದೇವಸ್ಥಾನ ಮತ್ತು ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಸೆಪ್ಟಂಬರ್ 30 ರಂದು ಶನಿವಾರ ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ `ಶ್ರೀದೇವಿ ರಮಣ ಮಹರ್ಷಿ ಪುರಸ್ಕಾರ’ ಸಮಾರಂಭ ನಡೆಯಲಿದ್ದು, ಪ್ರಸಕ್ತ ಸಾಲಿನಲ್ಲಿ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ರವರಿಗೆ ಶ್ರೀದೇವಿ ರಮಣ ಮಹ ರ್ಷಿ ಪುರಸ್ಕಾರ ನೀಡಿ ಗೌರವಿಸಲಾ ಗುವುದು ಎಂದು ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಆರ್. ಹುಲಿನಾಯ್ಕರ್ ತಿಳಿಸಿದರು.
ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದಲೂ ಶ್ರೀ ದುರ್ಗಾಂಬಿಕಾ ದೇವಸ್ಥಾನ ಮತ್ತು ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಜಂಟಿ ಸಹಯೋಗದೊಂದಿಗೆ ಆಧ್ಯಾತ್ಮಿಕ ಹಾಗೂ ಸಮಾಜ ಸೇವೆಯಲ್ಲಿ ಸಾಧನೆ ಮಾಡಿದ್ದವರಿಗೆ ಶ್ರೀದೇವಿ ರಮಣ ಮಹರ್ಷಿ ಪುರ ಸ್ಕಾರ ನೀಡುತ್ತಿದ್ದೇವೆ ಎಂದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾ ರಂಭವನ್ನು ಉದ್ಘಾಟಿಸುವರು. ಮಾಜಿ ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯಿಲಿ ಪುರಸ್ಕಾರ ನೀಡಲಿದ್ದಾರೆ. ಕಾನೂನು ಸಚಿವ ಎಚ್.ಕೆ.ಪಾಟೀಲ್ ಕಿರುಹೊತ್ತಿಗೆ ಲೋಕಾರ್ಪಣೆ ಗೊಳಿಸುವರು ಎಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ವೈದ್ಯಕೀಯ ನಿರ್ದೇಶP ಡಾ.ರಮಣ್ ಎಂ ಹುಲಿ ನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್, ನೇತ್ರತಜ್ಞರಾದ ಡಾ.ಲಾವಣ್ಯ, ಟ್ರಸ್ಟಿ ಅಂಬಿಕಾ ಎಂ ಹುಲಿನಾಯ್ಕರ್ ಇದ್ದರು.
ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿ
ನಾನು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಟಿಕೆಟ್ ಅಕಾಂಕ್ಷಿ ಎಂದು ಹುಲಿನಾಯ್ಕರ್ ಹೇಳಿದರು.
ಅವರು ಪತ್ರಿಕಾ ಗೋಷ್ಠಿ ನಂತರ ಸುದ್ದಿಗಾರರ ಜೊತೆ ಮಾತನಾಡಿ, ನನಗೆ ಈ ಸ್ಥಾನದಲ್ಲಿ ಸ್ಪರ್ಧಿಸುವ ಎಲ್ಲಾ ಅರ್ಹತೆ ಹೊಂದಿದ್ದೇನೆ. ಪಕ್ಷದ ವರಿಷ್ಠರಲ್ಲಿ ನನ್ನ ಹೆಸರು ಮುಂಚೂಣಿಯಲ್ಲಿದೆ ಎಂದರು.