ಷಫಿ ಅಹ್ಮದ್ ಭೇಟಿಗೆ ಕುಮಾರಸ್ವಾಮಿ ಆಗಮನ!

ತುಮಕೂರು: ಮಾಜಿ ಶಾಸಕರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ ಎಸ್.ಷಫಿ ಅಹ್ಮದ್ ಅವರನ್ನು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿಯವರು ಭೇಟಿ ಮಾಡಿ ಬರುತ್ತಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಈ ಸಂಬಧ ಪತ್ರಿಕಾಗೋಷ್ಠಿಯನ್ನು ಸಹ ಕರೆದಿದ್ದು, ಷಫಿ ಅಹಮದ್ ಬೆಂಬಲಿಗರು ಜೆಡಿಎಸ್ ಸೇರುವ ಸಾಧ್ಯತೆ ಎದ್ದು ಕಾಣುತ್ತಿದೆ.

ಈ ಬಾರಿಯ ಚುನಾವಣೆಯಲ್ಲಿ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಮ್ಮ ಅಳಿಯ ಡಾ. ರಫೀಕ್ ಅಹಮದ್ ರವರಿಗೆ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಷಫಿ ಅಹಮದ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ, ತಮ್ಮ ಆಕ್ರೋಶ ಹೊರಹಾಕಿದ್ದರು.

 ಬಳಿಕ ಪಕ್ಷದ ವರಿಷ್ಠರು ಮನವೊಲಿಸುವ ತಂತ್ರಗಳನ್ನು ನಡೆಸಿದ್ದರ ಪರಿಣಾಮ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ರವರಿಗೆ ಬೆಂಬಲ ಸೂಚಿಸಿದ್ದರು. ನಂತರದ ದಿನಗಳಲ್ಲಿ ಹಲವಾರು ಬೆಳವಣಿಗೆಗಳು ನಡೆದಿದ್ದು, ಷಫಿ ಅಹಮದ್ ನಿವಾಸಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಭೇಟಿ ನೀಡಿ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿರುವುದು ಷಫಿ ಅಹಮದ್ ಜೆಡಿಎಸ್ ಸೇರ್ಪಡೆಯಾಗುತ್ತಾರೆ ಎನ್ನಲಾಗುತ್ತಿದೆ.

ಏ.27 ರಂದು ತುಮಕೂರಿಗೆ ಮಾಜಿ ಸಿ.ಎಂ. ಹೆಚ್.ಡಿ.ಕುಮಾರಸ್ವಾಮಿ ಆಗಮಿಸುತ್ತಿದ್ದು ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಶಫಿ ಅಹಮದ್ ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *