ಶಾಂತರಸ ಕನ್ನಡದ ಗಜಲ್ ಜನಕ: ರವಿಕುಮಾರ್ ನೀಹ

ತುಮಕೂರು: ಶಾಂತರಸ ಕನ್ನಡದ ಗಜಲ್ ಜನಕ. ಕನ್ನಡದ ಗಜಲ್ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ಅವರ ಶತಮಾನೋತ್ಸವದ ಆಚರಣೆಗೆ ಸಾಹಿತ್ಯ ಇತಿಹಾಸದಲ್ಲಿ ಮಹತ್ವದ ಸ್ಥಾನವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಡಾ. ರವಿಕುಮಾರ್ ನೀಹ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ತುಮಕೂರು ಝೆನ್ ಟೀಮ್ ಹಾಗೂ ಬೆಂಗಳೂರಿನ ಸಂಸ ಥಿಯೇಟರ್ ಸೋಮವಾರ ಆಯೋಜಿಸಿದ್ದ ಶಾಂತರಸ ಶತಮಾನೋತ್ಸವ ಆಚರಣೆಯಲ್ಲಿ ಮಾತನಾಡಿದರು.

ಶಾಂತರಸ ಅವರ ಜನ್ಮ ಶತಮಾನೋತ್ಸವವನ್ನು ಇಂದು 31 ಜಿಲ್ಲೆಗಳಲ್ಲಿ ಇಂದು ಆಚರಿಸಲಾಗುತ್ತಿದೆ. ಶಾಂತರಸರು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದರು.

ಉತ್ತರ ಶ್ರೇಷ್ಠ, ದಕ್ಷಿಣ ಕನಿಷ್ಠ ಎನ್ನುವ ಭಾವನೆ ನಮ್ಮಲ್ಲಿದೆ. ಇದು ದೇಶದಲ್ಲಿ ಮಾತ್ರವಲ್ಲ, ಕರ್ನಾಟಕ ರಾಜ್ಯದಲ್ಲೂ ಇದೆ. ಇಂತಹ ವೈರುಧ್ಯಗಳನ್ನು ಹೋಗಲಾಡಿಸಲು ಶಾಂತರಸ ಶ್ರಮಿಸಿದರು ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಹಾಗೂ ಝೆನ್ ಟೀಮ್ ಮುಖ್ಯಸ್ಥ ಉಗಮ ಶ್ರೀನಿವಾಸ್ ಮತ್ತು ತುಮಕೂರು ವಿಶ್ವವಿದ್ಯಾನಿಲಯ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನ ವಿಭಾಗದ ಅಧ್ಯಕ್ಷ ಪೆÇ್ರ. ನಿತ್ಯಾನಂದ ಬಿ. ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *