ಶಿಲ್ಪಾ ಜಿ.ಎನ್ ಪಿಎಚ್‍ಡಿ ಪದವಿ

ತುಮಕೂರು: ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುತ್ ಮತ್ತು ವಿದ್ಯುನ್ಮಾನ ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಶಿಲ್ಪಾ ಜಿ.ಎನ್ ರವರು ಸಾಹೇ ವಿಶ್ವ ವಿದ್ಯಾಲಯದಿಂದ ಪಿಎಚ್‍ಡಿ ಪದವಿ ಪಡೆದಿದ್ದಾರೆ.

ಎಸ್‍ಎಸ್‍ಐಟಿಯಲ್ಲಿ ಹಿರಿಯ ಪ್ರಾಧ್ಯಾಪಕರಾಗಿರುವ ಡಾ.ಜಿ.ಎಸ್.ಶೇಷಾದ್ರಿ ಅವರ ಮಾರ್ಗದರ್ಶನದಲ್ಲಿ “Development of Stochastic Time Series and ANN Techniques for Load Forcecasting in Power System” ವಿಷಯದ ಅಧ್ಯಯನ ಕುರಿತು ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವಿಶ್ವವಿದ್ಯಾಲಯಕ್ಕೆ ಸಲ್ಲಿಸಲಾದ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್‍ಡಿ ಪದವಿ ನೀಡಲಾಗಿದೆ.

ಶಿಲ್ಪಾ ಅವರು ಕಳೆದ 13 ವರ್ಷಗಳಿಂದ ಎಸ್‍ಎಸ್‍ಐಟಿಯಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕೀರ್ಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದಾರೆ.
ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ಮಾಜಿ ಉಪಮುಖ್ಯಮಂತ್ರಿಗಳು ಡಾ.ಜಿ.ಪರಮೇಶ್ವರ್, ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಕನ್ನಿಕಾ ಪರಮೇಶ್ವರಿ, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಎಸ್.ರವಿಪ್ರಕಾಶ ಹಾಗೂ ಆಡಳಿತ ಮಂಡಳಿಯು ಶಿಲ್ಪಾ ಜಿ.ಎನ್ ಅವರಿಗೆ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *