ನವದೆಹಲಿ: ಕಳೆದ ಎರಡು ಮೂರು ದಿನಗಳಿಂದ ನಡೆದ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧದ ಅಭ್ಯರ್ಥಿಗಳ ಪಟ್ಟಿಯ ಚರ್ಚೆ ಬಳಿಕ, ಇಂದು ರಾತ್ರಿ 9 ಗಂಟೆಗೆ ದೆಹಲಿಯ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ನಾಯಕರ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು. ಈ ಸುದ್ದಿಗೋಷ್ಠಿಯಲ್ಲೇ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಮಾಡುಲಾಗುವುದು ಎನ್ನಲಾಗುತ್ತಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಸಂಬಂಧ ಇಂದು ಕೂಡ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವರು ಸೇರಿದಂತೆ ಹಲವು ಹಿರಿಯ ನಾಯಕರ ಸಭೆ, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸೋ ಸಂಬಂಧ ನಡೆಯಿತು. ಈ ಸಭೆಯಲ್ಲಿ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಮೊದಲ ಪಟ್ಟಿಯಲ್ಲಿ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿಯಿಂದ ಘೋಷಣೆ ಮಾಡಲಾಗುತ್ತಿದೆ.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸೇರುವುದು ಸೇರಿದಂತೆ, ಹಲವು ವಿಚಾರಗಳನ್ನು ಮಾಧ್ಯಮಗಳ ಮೂಲಕ ಮಾಹಿತಿ ಬಿಡುಗಡೆ ಮಾಡಲು ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಇಂದು ರಾತ್ರಿ 9ಕ್ಕೆ ಮಹತ್ವದ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಈ ಸುದ್ದಿಗೋಷ್ಠಿಯಲ್ಲೇ ಬಿಜೆಪಿಯಿಂದ ರಾಜ್ಯ ವಿಧಾನಸಭಾ ಚುನಾವಣೆಗೆ ಮೊದಲ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.