
ತುಮಕೂರು : ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
2013ರಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದ ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನ ಹುಂಡಿಯವರಾದ ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ಕಂಠಿರವ ಸ್ಟೇಡಿಯಂನಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಇಂದು ರಾಜ್ಯಪಾಲರಾದ ಥಾವರ್‍ಚಂದ್ ಗ್ಲುಹೋಟ್ ಅವರಿಂದ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಪ್ರಮಾಣವಚನವನ್ನು ದೇವರ ಹೆಸರಿನಲ್ಲಿ ಸ್ವೀಕರಿಸಿದರು.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯನವರಿಗೆ ರಾಜ್ಯಪಾಲರಾದ ಥಾವರ್‍ಚಂದ್ ಗ್ಲುಹೋಟ್ ಅವರು ಪುಷ್ಪಗುಚ್ಚ ನೀಡುವುದರ ಮೂಲಕ ಶುಭ ಹಾರೈಸಿದರು.