ತುಮಕೂರು: ದೇಶದ ಪ್ರತಿಯೊಬ್ಬ ಪ್ರಜೆಗೂ ಹಕ್ಕುಗಳ ಜೊತೆಗೆ, ಕರ್ತವ್ಯವನ್ನು ನೀಡಿ, ಶ್ರೀಮಂತ, ಬಡವ ಎಂಬ ಭೇಧಭಾವವಿಲ್ಲದೆ ಬದುಕುವಂತಹ ಸಂವಿಧಾನ ಬದ್ದ ಹಕ್ಕು ನೀಡಿದ್ದು ಡಾ.ಬಿ.ಆರ್.ಅಂಬೇಡ್ಕರ್,ಅಂತಹ ವ್ಯಕ್ತಿಯನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳುವುದರ ಜೊತೆಗೆ,ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳುವುದರ ಮೂಲಕ ಅವರ ದಾರಿಯಲ್ಲಿ ನಡೆಯುವ ಮೂಲಕ ದೇಶದ ಪ್ರಗತಿಯಲ್ಲಿ ಹೆಜ್ಜೆ ಹಾಕೋಣ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರುಳೀಧರ್ ಹಾಲಪ್ಪ ಹೇಳಿದರು.
ನಗರದ ಟೌನ್‍ಹಾಲ್ ಮುಂಭಾಗದಲ್ಲಿ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ದಲಿತ ಸಂಘರ್ಷ ಸಮಿತಿ ಜಂಟಿಯಾಗಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನದಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘÀಟಕದ ಅಧ್ಯಕ್ಷ ಆತೀಕ್ ಅಹಮದ್ ಮಾತನಾಡಿ ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮಬಾಳು ಎನ್ನುವ ಪರಿಕಲ್ಪನೆಯ ಮೂಲಕ ಇಡೀ ದೇಶದ ಜನರಿಗೆ ಸಾಮಾಜಿಕ ನ್ಯಾಯದ ಪರಿಕಲ್ಪನೆ ಬಿತ್ತಿದ್ದವರು ಡಾ.ಬಿ.ಆರ್.ಅಂಬೇಡ್ಕರ್ ಎಂದು ಹೇಳಿದರು.
ಸ್ವಾತಂತ್ರ ನಂತರದಲ್ಲಿ ಕೆಲವೇ ಮಂದಿಗೆ ಸಿಮೀತವಾಗಿದ್ದ ಮತದಾನದ ಹಕ್ಕನ್ನು, ಬಡವ, ಬಲ್ಲಿದ, ಲಿಂಗಭೇಧ ತಾರತಮ್ಯವಿಲ್ಲದೆ ಎಲ್ಲರಿಗೂ ದೊರೆಯುವಂತೆ ಮಾಡಿದವರು ಬಾಬಾಸಾಹೇಬ್ ಅಂಬೇಡ್ಕರ್.ಅವರನ್ನು ಇಂದು ಇಡೀ ವಿಶ್ವವೇ ಸ್ಮರಿಸುತ್ತಿದೆ ಎಂದರು.
ಗುಬ್ಬಿ ವಿಧಾನಸಭಾ ಕಾಂಗ್ರೆಸ್ ಕ್ಷೇತ್ರದ ಮುಖಂಡ ಜಿ.ಎಸ್.ಪ್ರಸನ್ನಕುಮಾರ್ ಮಾತನಾಡಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್,ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದಸಂಸ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ವಹಿಸಿದ್ದರು.