ರಾಜ್ಯ ಮಟ್ಟದ ಪತ್ರ ಕರ್ತರ ಕ್ರೀಡಾಕೂಟ : ಗೃಹ ಸಚಿವರಿಂದ ಲಾಂಛನ ಅನಾವರಣ

ತುಮಕೂರು, ನ.1: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಹಾಗೂ ಜಿಲ್ಲಾ ಘಟಕವು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ನವೆಂಬರ್ 24ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟದ ಲಾಂಛನವನ್ನು ಶುಕ್ರವಾರ ಜಿಲ್ಲಾ ಕನ್ನಡ ರಾಜ್ಯೋತ್ಸವ ವೇದಿಕೆಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಆರ್. ರಾಜೇಂದ್ರ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್, ವಾರ್ತಾಧಿಕಾರಿ ಹಿಮಂತರಾಜು ಜಿ., ರಾಷ್ಟ್ರೀಯ ಮಂಡಳಿ ಸದಸ್ಯ ಟಿ.ಎನ್. ಮಧುಕರ್, ಡಿ.ಎಂ. ಸತೀಶ್, ಶಾಂತರಾಜು, ಕಾರ್ಯದರ್ಶಿ ಸತೀಶ್ ಹಾರೋಗೆರೆ ಸೇರಿ ವಿವಿಧ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *