5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ, ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.
ಹೈಕೋರ್ಟ್ ಈ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಏಕ ಸದಸ್ಯ ಪೀಠ ರದ್ದು ಮಾಡಿತ್ತು, ಇದನ್ನು ಪ್ರಶ್ನಿಸಿ ಸರ್ಕಾರ ತ್ರೀ ಸದಸ್ಯ ಪೀಠದಲ್ಲಿ ಮೇಲ್ನನವಿ ಸಲ್ಲಿಸಿ ಬೋರ್ಡ್ ಎಕ್ಸಾಮ್ ಗೆ ಅನುಮತಿ ಪಡೆದಿತ್ತು.
ರುಪ್ಸಾದ ಲೋಕೇಶ್ ತಾಳಿಕಟ್ಟೆ ಸುಪ್ರೀಂ ಕೋರ್ಟ್ ನಲ್ಲಿ ಬೋರ್ಡ್ ಪರೀಕ್ಷೆ ರದ್ದು ಪಡುಸುವಂತೆ ಮೇಲ್ಮನವಿ ಸಲ್ಲಿಸಿ ಗೆಲುವು ಸಾಧಿಸಿದ್ದಾರೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (ಬೋರ್ಡ್ ಪರೀಕ್ಷೆ) ನಡೆಸಲು ಸರ್ಕಾರ ಆದೇಶಿಸಿತ್ತು. ಹಾಗೇ 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.
ರಾಜ್ಯ ಸರ್ಕಾರದ ಆದೇಶ ನಿರಂತರ ಮತ್ತು ಸಮಗ್ರ ಮೌಲ್ಯಮಾಪನ (ಸಿಸಿಇ) ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟ ಸರ್ವೋಚ್ಚ ನ್ಯಾಯಾಲಯದಲ್ಲಿ ವಾದಿಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ರೂಪ್ಸಾ ಪರವಾಗಿ ತೀರ್ಪು ನೀಡಿದೆ. 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಮುಂದಿನ ವಾರದಿಂದಲೇ ಪರೀಕ್ಷೆಗಳು ಪ್ರಾರಂಭವಾಗಲಿದ್ದು,
ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ. ಮತ್ತು ರಾಜ್ಯ ಸರ್ಕಾರದ ಆದೇಶವು ಶಿಕ್ಷಣ ಸಂಸ್ಥೆಗಳು ಅನುಸರಿಸುತ್ತಿದ್ದ ಸಿಸಿಇ ನಿಯಮಗಳನ್ನು ಉಲ್ಲಂಘಿಸಿದೆ ಎಂದರು.
ಬೋರ್ಡ್ ಪರೀಕ್ಷೆ ರದ್ದು ಪಡಿಸಿದ್ದಕ್ಕೆ ಕೋಕೇಶ್ ತಾಳಿಕಟ್ಟೆ ಹರ್ಷ ವ್ಯಕ್ತ ಪಡಿಸಿದ್ದಾರೆ.
ಈಗಾಗಲೇ 2 ಪರೀಕ್ಷೆಗಳು ನಡೆದಿದ್ದು, ಉಳಿದ ವಿಷಯಗಳ ಪರೀಕ್ಷೆಯನ್ನು ಶಾಲಾ ಮಟ್ಟದ ಪ್ರಶ್ನೆ ಪತ್ರಿಕೆಗಳ ಮೂಲಕ ಪರೀಕ್ಷೆ ನಡೆಯಲಿದೆ.