ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರ ಸಂಘದ ಅಧ್ಯಕ್ಷರಾಗಿ ಟಿ.ಆರ್. ರೇವಣ್ಣ ಆಯ್ಕೆ

ತುಮಕೂರು : ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಆರ್. ರೇವಣ್ಣ ಅವರು ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಜರುಗಿದ ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಟಿ.ಆರ್.ರೇವಣ್ಣ ಅವರನ್ನು ನೂತನ ಅಧ್ಯಕ್ಷರನ್ನಾಗಿ, ಕಾರ್ಯಾಧ್ಯಕ್ಷರನ್ನಾಗಿ ಆಶಾ ಪ್ರಸನ್ನಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು. ಸಂಘದ ಉಪಾಧ್ಯಕ್ಷರಾಗಿ ಡಿ.ಎಸ್. ಪುರುಷೋತ್ತಮ್, ಕಾರ್ಯದರ್ಶಿಯಾಗಿ ಆರ್.ಎಂ.ಸುದರ್ಶನ್, ಜಂಟಿ ಕಾರ್ಯದರ್ಶಿಯಾಗಿ ಧವನಂ ಎ.ಅಮರನಾಥ್, ಸಂಘಟನಾ ಕಾರ್ಯದರ್ಶಿಯಾಗಿ ಚೆನ್ನಕೇಶವ, ಖಜಾಂಚಿಯಾಗಿ ತು.ಮ.ಬಸವರಾಜು, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಪಿ.ಎಂ.ಪ್ರಸನ್ನಕುಮಾರ್, ಕಾನೂನು ಸಲಹೆಗಾರರನ್ನಾಗಿ ಎಸ್.ಸತ್ಯನ್ ಅವರನ್ನು ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *