ತುಮಕೂರು ಜಿಲ್ಲೆಯ 9 ತಾಲ್ಲುಕುಗಳನ್ನು ಬರಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಣೆ ಮಾಡಿದೆ.

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಮಳೆ ಮತ್ತು ಬೆಳೆ ಆಗದೆ ತೀವ್ರ ಸಂಕಷ್ಟವನ್ನು ಜಿಲ್ಲೆ ಅನುಭವಿಸುತ್ತಿದ್ದು, ಜಿಲ್ಲೆಯ ಪ್ರಮುಖ ಬೆಳೆಗಳಾದ ರಾಗಿ ಮತ್ತು ಶೇಂಗಾ ಬೆಳೆಯು ಮಳೆ ಇಲ್ಲದ ಕಾರಣ ಬಿತ್ತನೆಯೇ ಆಗಿಲ್ಲ.


ಅಲ್ಲದೆ ದನ-ಕರುಗಳಿಗೆ ನೀರು ಮತ್ತು ಮೇವಿನ ಕೊರತೆಯು ಕಾಣಿಸಿಕೊಳ್ಳತ್ತಾ ಇರುವುದರಿಂದ ತುಮಕೂರು ತಾಲ್ಲೂಕನ್ನು ಹೊರತು ಪಡಿಸಿ ಚಿಕ್ಕನಾಯಕನಹಳ್ಳಿ, ಶಿರಾ, ತಿಪಟೂರು, ಪಾವಗಡ, ಮಧುಗಿರಿ, ಕೊರಟಗೆರೆ, ಗುಬ್ಬಿ, ಕುಣಿಗಲ್, ತುರುವೇಕೆರೆ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಿದೆ. ತುಮಕೂರು ತಾಲ್ಲೂಕನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ರಾಜ್ಯ ಸರ್ಕಾರವು ಘೋಷಿಸಿರುತ್ತದೆ

ರಾಜ್ಯದಲ್ಲಿ ಒಟ್ಟು 161 ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಿದೆ.


ನೈಋತ್ಯ ಮುಂಗಾರು ಮಳೆ ವೈಫಲ್ಯದಿಂದಾಗಿ ರಾಜ್ಯದ 161 ತಾಲೂಕುಗಳಲ್ಲಿ ತೀವ್ರ ಬರ ಹಾಗೂ 34 ತಾಲೂಕುಗಳಲ್ಲಿ ಸಾಧಾರಣ ಬರಪೀಡಿತ ಪ್ರದೇಶವೆಂದು ರಾಜ್ಯಸರ್ಕಾರ ಘೋಷಿಸಿ ಆದೇಶ ಹೊರಡಿಸಿದೆ. ಕಂದಾಯ ಸಚಿವ ಕೃಷ್ಣಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಉಪ ಸಮಿತಿ ಸಭೆಯು ಕೇಂದ್ರ ಸರ್ಕಾರದ ಬರಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಒಟ್ಟು 195 ತಾಲೂಕುಗಳು ಬರಪೀಡಿತ ಪ್ರದೇಶ ಎಂದು ಘೋಷಿಸಲು ತೀರ್ಮಾನಿಸಿತ್ತು.

ಅದರಂತೆ ಕಂದಾಯ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ (ವಿಪತ್ತು ನಿರ್ವಹಣೆ ಹಾಗೂ ನೋಂದಣಿ ಮತ್ತು ಮುದ್ರಾಂಕ) ಟಿ.ಸಿ.ಕಾಂತರಾಜು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.ಮುಂದಿನ ಆರು ತಿಂಗಳ ಅವಗೆ ಅಥವಾ ಮುಂದಿನ ಆದೇಶದವರೆಗೆ 195 ತಾಲೂಕುಗಳು ಬರಪೀಡಿತವೆಂದು ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜಿಲ್ಲಾಕಾರಿಗಳು ಬರನಿರ್ವಹಣೆ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ ಎಸ್‍ಡಿಆರ್‍ಎಫ್ ಹಾಗೂ ಎನ್‍ಡಿಆರ್‍ಎಫ್ ನಿಯಮಗಳನ್ವಯ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಜೂನ್ ವಾಡಿಕೆಗಿಂತ ಶೇ.56 ರಷ್ಟು ಮಳೆ ಕೊರತೆಯಾಗಿದ್ದರೆ, ಜುಲೈನಲ್ಲಿ ವಾಡಿಕೆಗಿಂತ ಶೇ.29 ರಷ್ಟು ಹೆಚ್ಚು ಮಳೆಯಾಗಿತ್ತು. ಆಗಸ್ಟ್ ನಲ್ಲಿ ವಾಡಿಕೆಗಿಂತ ಶೇ.73 ರಷ್ಟು ಮಳೆ ಕೊರತೆಯಾಗಿದ್ದು, ಇದು ಕಳೆದ 125 ವರ್ಷಗಳಲ್ಲಿಯೇ ಅತಿ ಕಡಿಮೆ ಮಳೆ ದಾಖಲಾಗಿರುವುದು ಕಂಡುಬಂದಿದೆ.

ತುಮಕೂರು ಜಿಲ್ಲೆಯ ತೀವ್ರ ಬರಪೀಡಿತ ತಾಲ್ಲೂಕುಗಳ ಪಟ್ಟಿ ಈ ಕೆಳಕಂಡಂತಿದೆ :


ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಶಿರಾ, ತಿಪಟೂರು, ಪಾವಗಡ, ಮಧುಗಿರಿ, ಕೊರಟಗೆರೆ, ಗುಬ್ಬಿ, ಕುಣಿಗಲ್, ತುರುವೇಕೆರೆ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಿದೆ.

Leave a Reply

Your email address will not be published. Required fields are marked *