15ನೇ ಹಣಕಾಸು ಆಯೋಗದ ಅನುದಾನ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಸಾಮಗ್ರಿ ವೆಚ್ಚ ಬಿಡುಗಡೆಗೊಳಿಸಲು ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಡಿಸೆಂಬರ್ 9ರಂದು ಗ್ರಾಪಂ ಸದಸ್ಯರ ಬೆಳಗಾವಿ ಚಲೋ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ತಿಳಿಸಿದ್ದಾರೆ.
2025-26 ನೇ ಸಾಲಿಗೆ ಗ್ರಾಮ ಪಂಚಾಯತಿಗಳಿಗೆ ಬಿಡುಗಡೆಯಾಗಬೇಕಾದ 15ನೇ ಹಣಕಾಸು ಆಯೋಗದ ಅನುದಾನ ಇದುವರೆವಿಗೂ ಬಿಡುಗಡೆಯಾಗಿರುವುದಿಲ್ಲ. ಅದ್ದರಿಂದ ಕೂಡಲೇ ಕೇಂದ್ರ ಸರ್ಕಾರದಿಂದ ಸದರಿ ಅನುದಾನವನ್ನು ತರಿಸಿಕೊಂಡು ಗ್ರಾಮ ಪಂಚಾಯತಿಗಳಿಗೆ ಬಿಡುಗಡೆಗೊಳಿಸಲು ಕ್ರಮಕೈಗೊಳ್ಳಬೇಕು.
ಉದ್ಯೋಗಖಾತ್ರಿ ಯೋಜನೆಯಲ್ಲಿ ಅನುಷ್ಠಾನ ಮಾಡಿರುವ ಕಾಮಗಾರಿಗಳಿಗೆ ಸಂಬಂಧಿಸಿದ ಸಾಮಗ್ರಿ ವೆಚ್ಚ, 2025 ಜನವರಿಯಿಂದ ಇದುವರೆವಿಗೂ ಬಿಡುಗಡೆಯಾಗಿರುವುದಿಲ್ಲ. ಆದ್ದರಿಂದ ಕೂಡಲೇ ಸಾಮಗ್ರಿ ವೆಚ್ಚ ಬಿಡುಗಡೆಗೆಗೊಳಿಸಬೇಕು ಗ್ರಾಮ ಪಂಚಾಯತಿ ಹಂತದ ಗ್ರಂಥಾಲಯಗಳ( ಅರಿವು ಕೇಂದ್ರ) ಮೇಲ್ವಿಚಾರಕರಿಗೆ ರಾಜ್ಯ ಸರ್ಕಾರದಿಂದ 12 ಸಾವಿರ ರೂಗಳು, ಗ್ರಾಮ ಪಂಚಾಯತಿಗಳು ಸಂಗ್ರಹಿಸುವ ಗ್ರಂಥಾಲಯ ಕರ ಹಾಗೂ ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೀಗೆ ಮೂರು ಮೂಲಗಳಿಂದ ಹಣ ಸಂಗ್ರಹಿಸಿ ಮಾಸಿಕ ಕನಿಷ್ಠ ವೇತನ ನೀಡಲಾಗುತ್ತಿದೆ. ಇದರಿಂದಾಗಿ ಗ್ರಾಮ ಪಂಚಾಯತಿಗಳ ಮೇಲೆ ಆರ್ಥಿಕ ಹೊರೆ ಉಂಟಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರವೇ ಗ್ರಂಥಾಲಯ ಮೇಲ್ವಿಚಾರಕರ ಮಾಸಿಕ ಕನಿಷ್ಠವೇತನವನ್ನು ಸಂಪೂರ್ಣವಾಗಿ ಭರಿಸಬೇಕು ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿಗಳ ಘನತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಜೀವಿನಿ ಸಂಘಗಳ ಮಹಿಳೆಯರು, ತ್ಯಾಜ್ಯ ಸಂಗ್ರಹಣೆ ಮತ್ತು ಮಾರಾಟದ ಮೂಲಕ ಮಾಸಿಕ ಗೌರವ ಧನ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅವರುಗಳು ಗ್ರಾಮ ಪಂಚಾಯತಿಗಳನ್ನು ಅವರ ಮಾಸಿಕ ಗೌರವ ಧನಕ್ಕಾಗಿ ಒತ್ತಾಯಿಸುತ್ತಿದ್ದು, ಗಾಮ ಪಂಚಾಯತಿಗಳಿಗೆ ಅದು ಕಷ್ಠಸಾಧ್ಯವಾಗಿರುತ್ತದೆ. ಆದ್ದರಂದ ರಾಜ್ಯ ಸರ್ಕಾರವೇ ಅವರ ಮಾಸಿಕ ಗೌರವ ಧನ ಭರಿಸಬೇಕು.ಕೂಸಿನ ಮನೆ ಕಾರ್ಯಕರ್ತೆಯರಿಗೆ ಉದೋಗ ಖಾತ್ರಿ ಯೋಜನೆಯಿಂದ ಗೌರವ ಧನ ನೀಡಲು ಸಾಧ್ಯವಿಲ್ಲವೆಂದು ಇತ್ತೀಚೆಗೆ ಕೇಂದ್ರ ಸರ್ಕಾರ ಸ್ಟಷ್ಟಪಡಿಸಿದೆ. ಆದ್ದರಿಂದ ಅವರಿಗೂ ಸಹ ರಾಜ್ಯ ಸರ್ಕಾರವೇ ಮಾಸಿಕ ಗೌರವ ಧನ ನೀಡಬೇಕು ಎಂದು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿ ಸದಸ್ಯರ ಆಡಳಿತದಲ್ಲಿ ಸಹಕರಿಸಲು, ಮಾರ್ಗದರ್ಶನ ನೀಡಲು ತಲ್ಲೂಕು ಸಾಮಥ್ರ್ಯ ಸೌದಗಳಲ್ಲಿ ವಿಕೇಂದ್ರಿತ ತರಭೇತಿ ಸಂಯೋಜಕರನ್ನು ನೇಮಿಸಲಾಗಿತ್ತು.ಕಳೆದ ಮೇ ತಿಂಗಳಿನಿಂದ ಅವರುಗಳನ್ನು ಕರ್ತವ್ಯದಿಂದಬಿಡುಗಡೆಗೊಳಿಸಲಾಗಿದೆ. ಅವರುಗಳನ್ನು ಪುನಃನೇಮಿಸುವ ಮೂಲಕ ಗ್ರಾಮ ಪಂಚಾಯತಿ ಸದಸ್ಯರುಗಳು ಸುಗಮವಾಗಿ ಆಡಳಿತ ಮಾಡಲು ಶಕ್ತಿತುಂಬ ಬೇಕು. ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಒಬ್ಬರು, ಉದ್ಯೋಗ ಖಾತ್ರಿ ಕಾಮಗಾರಿಗಳಿಗೆ ಒಬ್ಬರು ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಒಬ್ಬರು ಹೀಗೆ ಮೂವರು ಇಂಜಿನಿಯರ್‍ಗಳನ್ನು ಮತ್ತು ಒಬ್ಬ ಇಂಜಿನಿಯರ್ ಗೆ 5ಪಂಚಾಯತಿಗಳ ಜವಾಬ್ದಾರಿ ನೀಡುವ ಬದಲುಬದಲು, ಮೂರು ತರಹದ ಕಾಮಗಾರಿಳಿಗಳಿಗೆ ಒಬ್ಬರೇ ಇಂಜಿನಿಯರ್ ನಂತೆ ಗ್ರಾಮ ಪಂಚಾಯತಿಗೊಬ್ಬ ಇಂಜಿನಿಯರ್ ನೇಮಿಸಬೇಕು. ಮತ್ತು ಈ ಹಿಂದೆ ನಮ್ಮ ಮಹಾ ಒಕ್ಕೂಟವು 28 ಬೇಡಿಕೆಗಳನ್ನು ಸರ್ಕಾದ ಮುಂದಿಟ್ಟು ಹೋರಾಟ ಮಾಡಿತ್ತು ಅವುಗಳಲ್ಲಿ ಅನೇಕ ಬೇಡಿಕೆಗಳನ್ನು ರಾಜ್ಯ ಸರ್ಕಾರವು ಈಡೇರಿಸಿದ್ದು, ಉಳಿಕೆ ಬೇಡಿಕೆಗಳನ್ನು ಶಿಘ್ರವೇ ಈಡೇರಿಸಬೇಕು ಎಂದಿದ್ದಾರೆ
ಈ ಮೇಲಿನ ಎಲ್ಲಾ ಬೇಡಿಕೆಗಳನ್ನು ರಾಜ್ಯ ಸರ್ಕಾದ ಮುಂದಿಟ್ಟು ಕೂಡಲೇ ಈಡೇರಿಸಲು ಸೂಕ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾಒಕ್ಕೂಟದ ನೇತೃತ್ವದಲ್ಲಿ ಬೆಳಗಾವಿ ಚಲೋ ಹೋರಾಟವನ್ನು ಡಿಸೆಂಬರ್ 9 ರಂದು ಬೆಳಗಾವಿಯ ಸುವರ್ಣಸೌಧದ ಬಳಿ ಹಮ್ಮಿಕೊಳ್ಳಲಾಗಿದೆ ಕಾಡಶೆಟ್ಟಿಹಳ್ಳಿ ಸತೀಶ್ ತಿಳಿಸಿದ್ದಾರೆ.