ತುಮಕೂರು: ಜಿಲ್ಲಾ ಕಾಂಗ್ರೆಸ್‍ನ ನಾಯಕರಲ್ಲಿ ಯಾವುದೇ ವಿರೋಧಗಳಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದರು.
ಅವರಿಂದು ಜೋಡೋ ಯಾತ್ರೆ ತುಮಕೂರು ಜಿಲ್ಲೆಗೆ ಆಗಮಿಸುವ ಹಿನ್ನಲೆಯಲ್ಲಿ ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪರ್ತಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್‍ನಲ್ಲಿ ಎಲ್ಲರೂ ಒಟ್ಟಗಿದ್ದೇವೆ, ಯಾವುದೇ ವಿರೋಧ-ಭಿನ್ನಾಭಿಪ್ರಾಯಗಳಿಲ್ಲ ಎಂದ ಅವರು, ನಮ್ಮಲ್ಲಿ ಮೊದಲ, ಎರಡನೇ, ಮೂರನೇ ನಾಯಕರು ಎಂಬುದಿಲ್ಲ ಎಲ್ಲರೂ ಒಟ್ಟಾಗಿ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗುಬ್ಬಿ ಶಾಸಕರಾದ ಎಸ್.ಆರ್.ಶ್ರೀನೀವಾಸ್‍ರವರು ಕಾಂಗ್ರೆಸ್‍ಗೆ ಬರುವುದರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾವಾಗುವುದಿಲ್ಲವೇ ಎಂಬ ಪ್ರಶ್ನೆಗೆ, ವಾಸಣ್ಣ ಕಾಂಗ್ರೆಸ್ ಸೇರ್ಪಡೆ ಖಚಿತ, ಅವರು ಬರುವುದಕ್ಕೆ ವಿರೋಧಗಳಿದ್ದರೆ ಅವುಗಳನ್ನು ಎಲ್ಲಾ ಸರಿಪಡಿಸಿಕೊಳ್ಳುತ್ತೇವೆ, ಎಲ್ಲರನ್ನು ಜೊತೆಗೂಡಿಸಿಕೊಂಡೆ ಹೋಗುತ್ತೇವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ರಾಮಕೃಷ್ಣ, ಕೆಪಿಸಿಸಿ ಕಾರ್ಯದರ್ಶಿ ಮುರಳೀಧರ ಹಾಲಪ್ಪ, ಮಾಜಿ ಶಾಸಕರಾದ ಡಾ.ರಫೀಕ್ ಆಹ್ಮದ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಶಶಿಹುಲಿಕುಂಟೆ, ಯುವ ಕಾಂಗ್ರಸ್ ಮುಖಂಡರಾದ ರಾಯಸಂದ್ರ ರವಿಕುಮಾರ್, ಗುಬ್ಬಿ ವಿಧಾನಸಭಾ ಕಾಂಗ್ರೆಸ್ ಮುಖಂಡರಾದ ಜಿ.ಎಸ್.ಪ್ರಸನ್ನಕುಮಾರ್, ಇಕ್ಬಾಲ್ ಅಹ್ಮದ್, ಡಾ.ಫರ್ಹಾನ ಬೇಗಂ ಮುಂತಾದವರಿದ್ದರು.