ತುಮಕೂರು : ತುಮಕೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಕ್ಬಾಲ್ ಅಹ್ಮದ್ ಅವರನ್ನು ಆಯ್ಯೆ ಮಾಡಲಾಗಿದೆ,ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಸ್.ಆರ್.ಶ್ರೀನಿವಾಸ ಅವರ ಹೆಸರನ್ನು ಅಂತಿಮ ಗೊಳಿಸಲಾಗಿದೆ
ಇಂದು ಕಾಂಗ್ರೆಸ್‍ನ ಹೈಕಮಾಂಡ್ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಪೈಪೋಟಿಯ ನಡುವೆ ಇಕ್ಬಾಲ್ ಅಹ್ಮದ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಟಿಕೆಟ್‍ಗಾಗಿ ಮಾಜಿ ಶಾಸಕ ರಫೀಕ್ ಅಹ್ಮದ್, ಅತೀಕ್ ಅಹ್ಮದ್ ನಡುವೆ ತೀವ್ರ ಪೈಪೋಟಿ ನಡೆದಿತ್ತು, ಈ ಹಿನ್ನಲೆಯಲ್ಲಿ ಮೊದಲ ಪಟ್ಟಿಯಲ್ಲಿ ತುಮಕೂರು ನಗರ ಕ್ಷೇತ್ರಕ್ಕೆ ಯಾರಿಗೂ ಟಿಕೆಟ್ ಘೋಷಣೆಯಾಗಿರಲಿಲ್ಲ, ಈ ಮಧ್ಯೆ ಅಟ್ಟಿಕಾ ಗೋಲ್ಡ್ ಕಂಪನಿಯ ಬೊಮ್ಮನಹಳ್ಳಿ ಬಾಬುಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಸಹ ಬಿಂಬಿಸಲಾಗಿತ್ತು, ಕೊನೆ ಕೊನೆಗೆ ತುಮಕೂರಿನ ಹಾಲಿ ಶಾಸಕ ಜ್ಯೋತಿ ಗಣೇಶ್ ಅವರಿಗೆ ಟಿಕೆಟ್ ನೀಡಲಾಗುತ್ತಿದೆ ಎಂದು ಸಹ ಊಹಪೋಹ ಎಬ್ಬಿಸಲಾಗಿತ್ತು, ಇಂದು ಎಲ್ಲಾದಕ್ಕೂ ತೆರೆ ಬಿದ್ದಿದೆ.
ಗುಬ್ಬಿಯಿಂದ ಜೆಡಿಎಸ್‍ನಿಂದ ಉಚ್ಚಾಟಿತರಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಾಜಿ ಶಾಸಕ ಎಸ್.ಆರ್.ಶ್ರೀನಿವಾಸ ಅವರಿಗೆ ಟಿಕೆಟ್ ನೀಡಲಾಗಿದೆ.
ಇಂದು ಬಿಡುಗಡೆಯಾಗಿರುವ ಕಾಂಗ್ರೆಸ್ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಯಾರ ಹೆಸರನ್ನು ಅಂತಿಮಗೊಳಿಸಿಲ್ಲ. ಉಳಿದ 58 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆಯನ್ನು ಮಾಡಿಲ್ಲ. ಏಪ್ರಿಲ್ 10ರ ವೇಳೆಗೆ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.