ತುಮಕೂರು : ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ ಒಕ್ಕೂಟಕ್ಕೆ ನಡೆದ ಚುನಾವಣೆಯಲ್ಲಿ ತುಮಕೂರು ತಲ್ಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಎ. ನಂಜೇಗೌಡ ಗೆಲುವು ಸಾಧಿಸುವ ಮೂಲಕ ಬಿಜೆಪಿಗೆ ತೀವ್ರ ಮುಖಭಂಗವುಂಟಾಗಿದೆ.
![](http://mythrinews.com/wp-content/uploads/2025/01/Gowri.jpg)
ಕಳೆದ 20ವರ್ಷಗಳಿಂದ ತುಮಕೂರು ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿಯೇ ತುಮಲ್ ಚಿನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದರು, ಆದರೆ ಈ ಬಾರಿ ತುಮಲ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಕೆ.ರೇಣುಕಾಪ್ರಸಾದ್ 66 ಮತಗಳನ್ನು ಪಡೆದು ಸೋಲು ಕಂಡರೆ, ಕಾಂಗ್ರೆಸ್ ಬೆಂಬಲಿತ ಹೆಚ್.ಎ.ನಂಜೇಗೌಡ 83 ಮತಗಳನ್ನು ಪಡೆದು 17 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ತುಮಕೂರು ಗ್ರಾಮಾಮತರದಲ್ಲಿ ಹಾಲಿ ಬಿಜೆಪಿ ಶಾಸಕರಾದ ಬಿ.ಸುರೇಶ್‍ಗೌಡ ಅವರಿದ್ದರೂ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವಲ್ಲಿ ವಿಫಲರಾಗಿ ಮುಖಭಂಗ ಅನುಭವಿಸಿದ್ದಾರೆಂದು ಕಾಂಗ್ರೆಸ್ ಮುಖಂಡರು ಹೇಳಿಕೊಂಡಿದ್ದಾರೆ.
ಕಾಂಗ್ರೆಸ್ ನ ಹೆಚ್.ಎ.ನಂಜೇಗೌಡ ಗೆಲುವು ಸಾಧಿಸಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಮತ್ತು ತುಮಕೂರು ಗ್ರಾಮಾಂತರ ನಿಕಟ ಪೂರ್ವ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದ್ದಾರೆ.