ತುಮಕೂರು : ತುಮಕೂರು ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಡಿ.ದೇವರಾಜ ಅರಸು ಬಸ್ನಿಲ್ದಾಣದಿಂದ ವಾಹನ ಕಾರ್ಯಾಚರಣೆಗೆ ಜುಲೈ 27ರಂದು ಮಧ್ಯಾಹ್ನ 12ಗಂಟೆಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರುತ್ತಾರೆ. ಪ್ರಸ್ತುತ ನಡೆಸುತ್ತಿರುವ ವಾಹನಗಳ ಕಾರ್ಯಾಚರಣೆಯನ್ನು ತಾತ್ಕಾಲಿಕ ಬಸ್ ನಿಲ್ದಾಣದಿಂದ ಸ್ಥಳಾಂತರಿಸಿ ನೂತನ ಬಸ್ ನಿಲ್ದಾಣದಿಂದ ಜುಲೈ 27ರಿಂದ ಪ್ರಾರಂಭಿಸಲಾಗುವುದು. ಇದೇ ಸಂದರ್ಭದಲ್ಲಿ ಗೃಹ ಸಚಿವರು ನೂತನ ವಾಹನಗಳಿಗೂ ಚಾಲನೆ ನೀಡಲಿದ್ದಾರೆ ಎಂದು ತುಮಕೂರು ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್. ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.