ತುಮಕೂರು ನಗರ ಕ್ಷೇತ್ರ ಕಾಂಗ್ರೆಸ್ ಟಿಕೆಟ್-ಹೈಕಮಾಂಡ್ ನಿರ್ಧಾರಕ್ಕೆ ಬದ್ಧ-ಡಾ.ರಫೀಕ್ ಅಹ್ಮದ್

ತುಮಕೂರು: ತುಮಕೂರು ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಟಿಕೇಟ್‍ಗಾಗಿ ಆಕಾಂಕ್ಷಿಗಳ ನಡುವೆ ಪೈಪೋಟಿ ಇದ್ದು, ಟಿಕೆಟ್ ಬಯಸಿ 8 ಜನರು ಅರ್ಜಿ ಸಲ್ಲಿಸಿದ್ದು,ಅವರೆಲ್ಲರೂ ತಮ್ಮ ಶಕ್ತಾನುಸಾರ ಹೈಕಮಾಂಡನ ಮೇಲೆ ಒತ್ತಡ ಹಾಕಲು ಪ್ರಯತ್ನಿಸುತ್ತಿದ್ದಾರೆ.ನಾನು ಕೂಡ ಒಂದು ಬಾರಿ ಶಾಸಕನಾಗಿ,ನನ್ನ ಕಾಲದಲ್ಲಿ ಆದ ಅಭಿವೃದ್ದಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಟಿಕೆಟ್‍ಗೆ ಪ್ರಯತ್ನ ನಡೆಸಿದ್ದೇನೆ.ಅಂತಿಮವಾಗಿ ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳಲಿದೆಯೋ ಅದಕ್ಕೆ ನಾವೆಲ್ಲರೂ ಬದ್ದರಾಗಿತ್ತೇವೆ ಎಂದು ಮಾಜಿ ಶಾಸಕ ಡಾ.ರಫೀಕ್ ಅಹಮದ್ ತಿಳಿಸಿದರು.

ಅವರಿಂದು ಅಖಿಲ ಭಾರತ್ ಕಾಂಗ್ರೆಸ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಹಾಗೂ ಕೆಪಿಸಿಸಿ ನಾಯಕರುಗಳ ನಿರ್ದೇಶನದಂತೆ ಕಾಂಗ್ರೆಸ್ ಪಕ್ಷ 2023ರ ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ಎರಡು ಘೋಷಣೆಗಳ ಗೃಹಲಕ್ಷ್ಮಿ ಕರಪತ್ರ ಅಭಿಯಾನವನ್ನು ಮಾಜಿ ಶಾಸಕ ಡಾ.ರಫೀಕ್ ಅಹಮದ್ ಮರಳೂರು ದಿಣ್ಣೆಯ ಶ್ರೀಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯದ ಬಡವರು, ಮದ್ಯವರ್ಗದವರು ಹಾಗೂ ಗ್ರಾಮೀಣ ಭಾಗದ ಜನರನ್ನು ಗಮನದಲ್ಲಿಟ್ಟುಕೊಂಡು ಈಗಾಗಲೇ ಎರಡು ಯೋಜನೆಗಳನ್ನು ಘೋಷಿಸಿದೆ. ಸರಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಮುಖ್ಯಸ್ಥೆ ಮಹಿಳೆಯ ಖಾತೆಗೆ ಮಾಸಿಕ ಎರಡು ಸಾವಿರ ರೂಗಳು ಜಮೆ ಹಾಗೂ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲು ನಿರ್ಧರಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಹಾಕಿಕೊಂಡಿದೆ.ಇದು ಪ್ರಾಣಾಳಿಕೆ ಯಲ್ಲ ವಾಗ್ಧಾನ ಎಂದು ಈಗಾಗಲೇ ಕೆಪಿಸಿಸಿ ಅಧ್ಯಕ್ಷರು ಹೇಳಿದ್ದು,ಶೇ100ಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲಿದೆ.2013 ಚುನಾವಣೆಯ ವೇಳೆ ನೀಡಿದ್ದ 168 ಭರವಸೆಗಳಲ್ಲಿ,165ನ್ನು ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಹಾಗಾಗಿ ಈ ಭರವಸೆಯೂ ಈಡೇರಿಲಿದೆ ಎಂಬ ನಂಬಿಕೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಇದೆ ಎಂದರು.

ಈ ವೇಳೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾದ ಆಟೋ ರಾಜು,ಮೆಹಬೂಬ್ ಪಾಷ,ಕೆಪಿಸಿಸಿ ಹಿಂದುಳಿದ ಘಟಕದ ಅನಿಲ್‍ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *