ತುಮಕೂರು ದಸರಾ : ಸೆ.22ರಂದು ಅಂಬಾರಿ ಡಬಲ್ ಡೆಕ್ಕರ್ ಬಸ್ ಪ್ರಯಾಣಕ್ಕೆ ಚಾಲನೆ

ತುಮಕೂರು : ನಗರದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ಅದ್ದೂರಿಯಾಗಿ ಜರುಗಲಿರುವ ದಸರಾ ವೈಭವ ಹಾಗೂ ದೀಪಾಲಂಕಾರವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ಅಂಬಾರಿ ಡಬಲ್ ಡೆಕ್ಕರ್ ಬಸ್ಸಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಸೆಪ್ಟೆಂಬರ್ 22ರಂದು ಬೆಳಿಗ್ಗೆ 6.30 ಗಂಟೆಗೆ ಬಿ.ಜಿ.ಎಸ್. ವೃತ್ತದಲ್ಲಿ ಚಾಲನೆ ನೀಡಲಿದ್ದಾರೆ.

ಡಬಲ್ ಡೆಕ್ಕರ್ ಬಸ್ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ ಪ್ರತಿ ದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಮಧ್ಯಾಹ್ನ 2 ರಿಂದ ರಾತ್ರಿ 8 ಗಂಟೆಯವರೆಗೆ ಜೂನಿಯರ್ ಕಾಲೇಜು ಮೈದಾನ(ದಸರಾ ಉತ್ಸವ ಮೈದಾನದ ಸ್ಥಳ)ದಿಂದ ಬಿ.ಜಿ.ಎಸ್. ವೃತ್ತ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ರಸ್ತೆ, ಆಂಜನೇಯ ಸ್ಟ್ಯಾಚು, ಅಮಾನಿಕೆರೆ, ಶಿವಕುಮಾರ ಸ್ವಾಮೀಜಿ ಸರ್ಕಲ್ ಮಾರ್ಗವಾಗಿ ಜೂನಿಯರ್ ಕಾಲೇಜು ಮೈದಾನದವರೆಗೆ ಕಾರ್ಯಾಚರಣೆ ಮಾಡಲಿದೆ.

ಈ ಡಬಲ್ ಡೆಕ್ಕರ್ ಬಸ್ ಲಂಡನ್‍ನ ಬಿಗ್ ಬಸ್ ಶೈಲಿಯಲ್ಲಿದ್ದು, ಒಳಗೆ ಹಾಗೂ ಅದರ ಮೇಲೆ ತೆರೆದ ಆಸನಗಳನ್ನು ಒಳಗೊಂಡಿದೆ. ಮಳೆ ಬಂದರೆ ಒಳಗಿನ ಆಸನದಲ್ಲಿ ಕುಳಿತು ರಕ್ಷಣೆ ಪಡೆಯಬಹುದಾಗಿದೆ. ಮೇಲೆ ತೆರೆದ ಆಸನದ ವ್ಯವಸ್ಥೆ ಇರುವುದರಿಂದ ಸಾರ್ವಜನಿಕರು ಕುಳಿತುಕೊಂಡೇ ದಸರಾ ವೈಭವವನ್ನು ನೋಡಬಹುದಾಗಿದೆ. ಪ್ರಯಾಣವು ಸಂಪೂರ್ಣ ಉಚಿತವಾಗಿದ್ದು, ಯಾವುದೇ ಪ್ರಯಾಣ ವೆಚ್ಚ ಇರುವುದಿಲ್ಲ. ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *