
ತುಮಕೂರು : ಮಾಜಿ ಪ್ರಧಾನಿಗಳು ಮತ್ತು ಜಾತ್ಯತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೆಗೌಡರ ತಿರ್ಮಾನದಂತೆ ತುಮಕೂರು ಜಿಲ್ಲೆಯಲ್ಲೂ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಲೋಕಸಭಾ ಚುನಾವಣೆಗೆ ಮೈತ್ರಿಯನ್ನು ಸರ್ವಾನುಮತದಿಂದ ಒಪ್ಪಿರುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಆರ್.ಸಿ.ಆಂಜಿನಪ್ಪ ತಿಳಿಸಿದರು.
ಅವರಿಂದು ಜಿಲ್ಲಾ ಜೆಡಿಎಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಜಿ ಪ್ರಧಾನಿಗಳು, ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಹೆಚ್.ಡಿ.ದೇವೇಗೌಡರುಮ ಮುಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಕೇಂದ್ರ ಸಚಿವರು ಹಾಗೂ ಹಾಲಿ ಪಕ್ಷದ ರಾಜ್ಯಾಧ್ಯಕ್ಷರಾದ ಸಿ.ಎಂ. ಹಿಂರವರು ಮಾಜಿ ಸಚಿವರು, ಹಾಲಿ ಶಾಸಕರು ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಕೋರ್, ಕಮಿಟಿ ಅಧ್ಯಕ್ಷರಾದ ಶಾಸಕರುಗಳು ಸೇರಿದಂತೆ ಕಾರ್ಯಕರ್ತರ ಸಭೆಯಲ್ಲಿ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಬಹಿರಂಗವಾಗಿ ಘೋಷಿಸಿರುದನ್ನು ತುಮಕೂರು ಜಿಲ್ಲೆಯ ಎಲ್ಲಾ ನಾಯಕರು, ಕಾರ್ಯಕರ್ತರು ಒಪ್ಪಿರುವುದಾಗಿ ತಿಳಿಸಿದರು.
ಹೆಚ್ ಡಿ ದೇವೇಗೌಡರವರು ಸೇರಿದಂತೆ ಹಲವಾರು ಮುಖಂಡರು ಸೇರಿ ಕಟ್ಟಿರುವ ಪ್ರಾದೇಶಿಕ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ, ಪಕ್ಷವನ್ನು ಉಳಿಸಿ ಬೆಳಸುವ ಸಲುವಾಗಿ ಇದುವರೆವಿಗೂ ಪಕ್ಷದ ರಾಜ್ಯದ ಪರಿಷ್ಕರು ಕೈಗೊಂಡ ಎಲ್ಲಾ ನಿರ್ಣಯಗಳನ್ನು ನಾವು ಪಾಲಿಸಿಕೊಂಡು ಬರುತ್ತಿದ್ದೇವೆ, ಅದರಂತೆಯೇ ಜಿಲ್ಲಾ ಕಮಿಟಿಯ ಅಧ್ಯಕ್ಷ ಸದಸ್ಯರು, ಜಿಲ್ಲೆಯಿಂದ ಆಯ್ಕೆಯಾಗಿರುವ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ವಿವಿಧ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಪಾಲಿಕೆ ಹಾಲಿ ಮತ್ತು ಮಾಜಿ ಸದಸ್ಯರು, ಸೇರಿದಂತೆ ವಿವಿಧ ಘಟಕಗಳ ಮುಖಂಡರುಗಳು, ಅಪಾರ ಕಾರ್ಯಕರ್ತರು ಸೆಪ್ಟಂಬರ್ 16ರಂದು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಸಭೆ ಸೇರಿ ತಾವುಗಳು ಕೈಗೊಂಡಿರುವ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆಂದು ರಾಷ್ಟ್ರ, ರಾಜ್ಯ ನಾಯಕರಿಗೆ ತೀಲಿಸುವುದಾಗಿ ಹೇಳಿದರು.
ದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯಿಂದ ಹೆಚ್.ಡಿ.ದೇವೇಗೌಡರು ಸ್ಪರ್ಧಿಸಿದ್ದರು ಆದರಂತೆ ಈ ಬಾರಿಯು ಹೆಚ್.ಡಿ. ದೇವೇಗೌಡರು ಅಥವಾ ಹೆಚ್.ಡಿ.ಕುಮಾರ ಸ್ವಾಮಿ, ಸೇರಿದಂತೆ ನಮ್ಮ ಪಕ್ಷದ ವತಿಯಿಂದ ಯಾರನ್ನಾದರೂ ಸಹ ಅಭ್ಯರ್ಥಿಯನ್ನಾಗಿ ಮಾಡಿದಲ್ಲಿ ಬಿಜೆಪಿ ಪಕ್ಷದೊಂದಿಗೆ ಸೇರಿ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆಂದು ಆರ್.ಸಿ.ಆಂಜಿನಪ್ಪ ತಿಳಿಸಿದರು.
ಕಾಂಗ್ರೆಸ್ ಪಕ್ಷವು ಜೆಡಿಎಸ್ ಬಿಜೆಪಿಯೊಂದಿಗಿನ ಮೈತ್ರಿಯನ್ನು ಟೀಕಿಸುವುದು ಸರಿಯಿಲ್ಲ, ನಮ್ಮ ಪಕ್ಷವು ಸಿದ್ಧಾಂತಕ್ಕೆ ಬದ್ಧವಾಗಿರುತ್ತದೆ, ಕಾಂಗ್ರೆಸ್ ಪಕ್ಷವು 28 ಪಕ್ಷಗಳೊಂದಿಗೆ ಸೇರಿ ಕೇಂದ್ರ ಸರ್ಕಾರವನ್ನು ರಚಿಸಿರಲಿಲ್ಲವೇ, ರಾಜ್ಯದಲ್ಲಿ ಬಹುಮತವಿದ್ದರೂ ಇತರೆ ಪಕ್ಷದವರನ್ನು ಕಾಂಗ್ರೆಸ್‍ಗೆ ಬರುವಂತೆ ಕರೆಯುತ್ತಿರುವುದನ್ನು ನೋಡಿದರೆ ಆ ಪಕ್ಷದ ದುಃಸ್ಥಿತಿ ಏನು ಎಂಬುದು ತಿಳಿಯಲಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ, ರಾಜಕೀಯದಲ್ಲಿ ಯಾರೂ ಶತೃಗಳಲ್ಲ, ರಾಜಕೀಯಕ್ಕಾಗಿ ಆಯಾ ಕಾಲಕ್ಕೆ ತಕ್ಕಂತೆ ನಡೆದುಕೊಂಡಿರುತ್ತೇವೆ, ದೇಶಕ್ಕೆ ಈಗ ಮೈತ್ರಿ ಅನಿವಾರ್ಯವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ, ಡಿ.ನಾಗರಾಜಯ್ಯ, ಪರಾಜಿತ ಅಭ್ಯರ್ಥಿಗಳಾದ ಬಿ.ಎಸ್.ನಾಗರಾಜು, ಶಾಂತಕುಮಾರ್, ರುದ್ರೇಶ್, ಮತ್ತು ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಟಿ.ಆರ್.ನಾಗರಾಜು ಉಪಸ್ಥಿತರಿದ್ದರು.