ತುಮಕೂರು ವಿವಿ ಕುಲಸಚಿವರಿಗೆ ರಾಣಿ ಚೆನ್ನಭೈರಾದೇವಿ ಪ್ರಶಸ್ತಿ

ತುಮಕೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರಿಗೆ ಕರ್ನಾಟಕ ರಣಧೀರರ ವೇದಿಕೆ ಕೊಡಮಾಡುವ ರಾಣಿ ಚೆನ್ನಭೈರಾದೇವಿ ಪ್ರಶಸ್ತಿ 2024ಕ್ಕೆ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜûಮ್ ಜûಮ್ ಭಾಜನರಾಗಿದ್ದಾರೆ.

ಕನ್ನಡ ನಾಡು-ನುಡಿ, ನೆಲ, ಜಲ, ಭಾಷೆ, ಸಾಹಿತ್ಯ ಹಾಗೂ ಸಮಾಜಸೇವೆಯಲ್ಲಿ ಸೇವೆ ಸಲ್ಲಿಸಿರುವವರಿಗೆ ಈ ಪ್ರಶಸ್ತಿ ನೀಡಲಾಗುವುದು. ಇತ್ತೀಚೆಗೆ ನೆಲಮಂಗಲದಲ್ಲಿ ನಡೆದ 5ನೆಯ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಭುವನೇಶ್ವರಿ ಹಬ್ಬ ಮತ್ತು ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ 2024ರ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ರಣಧೀರರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಶಂಕರ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪ ಗೌಡ ಕೆ. ಎಸ್., ಮತ್ತಿತರ ಗಣ್ಯರು ಈ ಸಂದರ್ಭ ಹಾಜರಿದ್ದರು.

Leave a Reply

Your email address will not be published. Required fields are marked *