ತುಮಕೂರು : ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ (ಆಡಳಿತ) ನಾಹಿದ ಜಮ್ ಜಮ್ ಅವರನ್ನು ತುಮಕೂರು ಉಪ ವಿಭಾಗಾಧಿಕಾರಿಗಳನ್ನಾಗಿ ವರ್ಗಾವಣೆ ಮಾಡಲಾಗಿದೆ.
ತುಮಕೂರು ಉಪವಿಭಾಗಾಧಿಕಾರಿಗಳಾಗಿದ್ದ ಗೌರವ್ ಕುಮಾರ್ ಶೆಟ್ಟಿ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ(ಅಭಿವೃದ್ಧಿ)ಯಾಗಿ ವರ್ಗಾವಣೆ ಮಾಡಲಾಗಿದೆ.
ನಾಹಿದ ಜಮ್ ಜಮ್ ಅವರು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದರು.