ತುಮಕೂರು-ಯಶವಂತಪುರ ಮೆಮು ರೈಲು

ತುಮಕೂರು : ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆಯು ಸೆಪ್ಟೆಂಬರ್ 2ರಂದು ಅನುಮೋದನೆ ನೀಡಿದೆ ಎಂದು ಕೇಂದ್ರದ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಜಿಲ್ಲಾ ಸಂಸದ ವಿ. ಸೋಮಣ್ಣ ತಿಳಿಸಿದ್ದಾರೆ.

ತುಮಕೂರುನಿಂದ ಬೆಂಗಳೂರು ಹಾಗೂ ಬೆಂಗಳೂರಿಂದ ತುಮಕೂರಿಗೆ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜನತೆಯ ಬಹು ದಿನಗಳ ಬೇಡಿಕೆ ನೆರವೇರಿದಂತಾಗಿದೆ.

ಈ ಮೆಮು ರೈಲು ತುಮಕೂರು-ಯಶವಂತಪುರ ಮೆಮು ಟ್ರೈನ್ 06201(66561) ಬೆಳಿಗ್ಗೆ 8.55ಕ್ಕೆ ತುಮಕೂರಿಂದ ಹೊರಟು ಬೆಳಿಗ್ಗೆ 10.25ಕ್ಕೆ ಯಶವಂತಪುರ ತಲುಪಲಿದೆ. ಟ್ರೈನ್ ಸಂಖ್ಯೆ 06202(66562) ಯಶವಂತಪುರದಿಂದ ಸಂಜೆ 5.40ಕ್ಕೆ ಹೊರಟು ಸಾಯಂಕಾಲ 7.05ಕ್ಕೆ ತುಮಕೂರು ತಲುಪಲಿದೆ. ಪ್ರತಿ ಸೋಮವಾರ ವಿಶೇಷ ಮೆಮು ಟ್ರೈನ್ ನಂಬರ್ 06205(6565) ಬಾಣಸವಾಡಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6.15ಕ್ಕೆ ಹೊರಟು ತುಮಕೂರಿಗೆ ಬೆ. 8.35ಕ್ಕೆ ತಲುಪಲಿದೆ. ಅದೇ ರೀತಿ ಪ್ರತಿ ಶನಿವಾರ ವಿಶೇಷ ಮೆಮು ಟ್ರೈನ್ ನಂಬರ್ 06206(66566) ತುಮಕೂರಿನಿಂದ ಸಾಯಂಕಾಲ 7.40ಕ್ಕೆ ಹೊರಟು ರಾತ್ರಿ 10.05ಕ್ಕೆ ಬಾಣಸವಾಡಿ ತಲುಪಲಿದೆ.

ಈ ಮೆಮು ರೈಲು ಮಾರ್ಗ ಮಧ್ಯದಲ್ಲಿ ಕ್ಯಾತಸಂದ್ರ, ಹೀರೇಹಳ್ಳಿ, ದಾಬಸ್‍ಪೇಟೆ, ನಿಡವಂದ, ಮುದ್ದಲಿಂಗನಹಳ್ಳಿ, ದೊಡ್ಡಬೆಲೆ, ಭೈರನಾಯಕನಹಳ್ಳಿ, ಗೊಲ್ಲಹಳ್ಳಿ, ಸೋಲದೇವನಹಳ್ಳಿ, ಚಿಕ್ಕಬಾಣಾವರ ರೈಲ್ವೆ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಭಾನುವಾರ ಹೊರತುಪಡಿಸಿ ವಾರದ 6 ದಿನಗಳಲ್ಲಿ ತುಮಕೂರು-ಯಶವಂತಪುರ ಮಾರ್ಗದಲ್ಲಿ ಈ ಮೆಮು ರೈಲು ಚಲಿಸಲಿದೆ.

Leave a Reply

Your email address will not be published. Required fields are marked *