ತುಮಕೂರು ಜಿಲ್ಲೆ ಮಗಳು, ಹಲವರನ್ನು ಹರಸಿದ ಸಾಲುಮರದ ತಿಮ್ಮಕ್ಕ ಇನ್ನ ನೆನಪು ಮಾತ್ರ

ತುಮಕೂರು : 114 ವರ್ಷಗಳ ಸಾರ್ಥಕ ಬದುಕಿಗೆ ವೃಕ್ಷಮಾತೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಮಗಳಾದ ಸಾಲುಮರದ ತಿಮ್ಮಕ್ಕ ಇಂದು ತಮ್ಮ ಬದುಕಿಗೆ ವಿದಾಯ ಹೇಳಿದರು.

ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ದಾಖಲಾಗಿದ್ದರು. ಕಳೆದ ಕೆಲವು ದಿನಗಳ ಹಿಂದೆ ಮನೆಯಲ್ಲಿ ತಿಮ್ಮಕ್ಕ ಜಾರಿ ಬಿದ್ದಿದ್ದರು. ಅಲ್ಲದೆ ತೀವ್ರ ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ಅಸುನೀಗಿದರು.

ತುಮಕೂರಿನಲ್ಲಿ ಡಾ|| ಬಸವರಾಜು ಅವರು ಚರಕ ಆಸ್ಪತ್ರೆ ಉದ್ಘಾಟನೆಯಲ್ಲಿ ಭಾಗವಹಿಸಿದ್ದ ಸಾಲುಮರದ ತಿಮ್ಮಕ್ಕ ಮತ್ತು ಸಿನಿಮಾ ನಿರ್ದೇಶಕರಾದ ಕೆ.ಎಂ.ಶಂಕರಪ್ಪ, ಮಾಜಿ ಅಡ್ವೋಕೇಟ್ ಜನರಲ್ ಪ್ರೊ.ರವಿವರರ್ಮಕುಮಾರ್, ಶ್ರೀದೇವಿ ಆಸ್ಪತ್ರೆಯ ಡಾ||ಹುಲಿನಾಯ್ಕರ್ ,ಚರಕ ಆಸ್ಪತ್ರೆಯ ಡಾ||ಬಸವರಾಜು ಅವರನ್ನು ಕಾಣಬಹುದು.

ಸಾಲುಮರದ ತಿಮ್ಮಕ್ಕ ನಾಡಿನ ಜನತೆಯ ವೃಕ್ಷಮಾತೆಯಾಗಿ ಹಲವರನ್ನು ಹರಸಿ ವೃಕ್ಷಗಳಂತೆಯೇ ಬೆಳೆಸಿದ್ದರು, ಇದಕ್ಕೆ ಸಾಕ್ಷಿ ತುಮಕೂರಿನಲ್ಲಿ ಡಾ|| ಬಸವರಾಜುರವರ ಚರಕ ಆಸ್ಪತ್ರೆಯನ್ನು ಸಾಲುಮರದ ತಿಮ್ಮಕ್ಕ, ಚಲನ ಚಿತ್ರ ನಿರ್ದೇಶಕರು ಹಾಗೂ ಬುದ್ಧ ಗುರುಗಳಾದ ಕೆ.ಎಂ.ಶಂಕರಪ್ಪನವರ ಒಡಗೂಡಿ ಉದ್ಘಾಟಿಸಿ ಹರಸಿದ್ದರು.

ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ತುಮಕೂರು ಎಂದರೆ ತುಂಬಾ ಅಚ್ಚು-ಮೆಚ್ಚು, ಯಾರೇ ಕರೆಯಲಿ ಬಂದು ತಮ್ಮ ಎರಡೂ ಕೈಗಳಿಂದ ಹರಸಿ, ಆಶೀರ್ವದಿಸುತ್ತಿದ್ದರು. ತುಮಕೂರಿನ ಸಾಹಿತ್ಯ ಪ್ರೇಮಿಗಳು, ಪ್ರಗತಿಪರರು, ವಿಶ್ವವಿದ್ಯಾನಿಲಯ ಸೇರಿದಂತೆ ಹಲವರು ಸಾಲುಮರದ ತಿಮ್ಮಕ್ಕನನ್ನು ಪ್ರೀತಿಯಿಂದ ಭರಮಾಡಿಕೊಂಡು ಸತ್ಕರಿಸುತ್ತಿದ್ದರು.

ಇಂತಹ ಪ್ರೀತಿಯ ವೃಕ್ಷಮಾತೆ ತಮ್ಮ 114ನೇ ವಯಸ್ಸಿನಲ್ಲಿ ನಾಡಿನ ವೃಕ್ಷಗಳನ್ನು ಬಿಟ್ಟು ತಾನು ಒಂದು ವೃಕ್ಷವಾಗಿ ಬೆಳೆಯಲು ಹೊರಟು ಬಿಟ್ಟರು.

ಸಾಲುಮರದ ತಿಮ್ಮಕ್ಕ ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‍ಲ್ಯಾಂಡ್, ಕ್ಯಾಲಿಪೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಜೀವನ
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ, ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.

ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ 94ರಲ್ಲಿ ತಿಮ್ಮಕ್ಕರವರು ಬೆಳಸಿದ ಆಲದ ಮರಗಳು. ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ 4 ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ 20 ಸಸಿಗಳನ್ನು ನೆಡಲಾಯಿತು.

ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು. ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವಗಳನ್ನು ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ನೆಡಲಾಯಿತು.

ತಿಮ್ಮಕ್ಕನವರ ಸಾಧನೆಯ ಫಲಕ

ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು. ಒಟ್ಟಾರೆ 284 ಸಸಿಗಳನ್ನು ನೆಡಲಾಗಿ, ಇಂದಿಗೆ ಅವುಗಳ ಮೌಲ್ಯವು ಸುಮಾರು 15 ಲಕ್ಷ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ. ಈ ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವು ವಹಿಸಿಕೊಂಡಿದೆ.

ಪ್ರಶಸ್ತಿ, ಗೌರವ
ತಮ್ಮ ಸಾಧನೆಗಾಗಿ ತಿಮ್ಮಕ್ಕ ಅವರಿಗೆ ಈ ಕೆಳಗಿನ ಸನ್ಮಾನಗಳು ಮತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ.

ರಾಷ್ಟ್ರೀಯ ಪೌರ ಪ್ರಶಸ್ತಿ – 1995[4]
ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ – 1997[4]
ವೀರಚಕ್ರ ಪ್ರಶಸ್ತಿ – 1997
ಮಹಿಳಾ ಮತ್ತು ಶಿಶು ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ – ಇವರಿಂದ ಮಾನ್ಯತೆಯ ಪ್ರಮಾಣ ಪತ್ರ
ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಬೆಂಗಳೂರು – ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ – 2000
ಗಾಡ್‍ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ – 2006
ಪಂಪಾಪತಿ ಪರಿಸರ ಪ್ರಶಸ್ತಿ
ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
ವನಮಾತೆ ಪ್ರಶಸ್ತಿ
ಮಾಗಡಿ ವ್ಯಕ್ತಿ ಪ್ರಶಸ್ತಿ
ಶ್ರೀಮಾತಾ ಪ್ರಶಸ್ತಿ
ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
ಕರ್ನಾಟಕ ಪರಿಸರ ಪ್ರಶಸ್ತಿ
ಮಹಿಳಾರತ್ನ ಪ್ರಶಸ್ತಿ
ನ್ಯಾಷನಲ್ ಸಿಟಿಜನ್ ಪ್ರಶಸ್ತಿ
ರಾಜ್ಯೋತ್ಸವ ಪ್ರಶಸ್ತಿ
ಹೂವಿನಹೊಳೆ ಪ್ರತಿಷ್ಠಾನ Archived2021-05-18 ವೇಬ್ಯಾಕ್ ಮೆಷಿನ್ ನಲ್ಲಿ.ದ ವಿಶ್ವಾತ್ಮ ಪುರಸ್ಕಾರ 2015
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.
2010ರ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಲಭಿಸಿದೆ.
2019 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್.

Leave a Reply

Your email address will not be published. Required fields are marked *