ಕೇಂದ್ರ ಸಚಿವ ವಿ.ಸೋಮಣ್ಣನವರ ಹುಟ್ಟುಹಬ್ಬ ಆಚರಣೆ

ತುಮಕೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ 74ನೇ ಜನ್ಮದಿನದ ಅಂಗವಾಗಿ ಶನಿವಾರ ನಗರದ ವಿವಿಧೆಡೆ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಚಿವ ಸೋಮಣ್ಣನವರು ಬೆಳಿಗ್ಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಸಿದ್ಧಲಿಂಗ ಸ್ವಾಮೀಜಿಗಳ ದರ್ಶನ ಮಾಡಿ ಆಶೀರ್ವಾದ ಪಡೆದರು.

ಸಚಿವರ ಜನ್ಮದಿನ ಆಚರಣೆ ಪ್ರಯುಕ್ತ ಕ್ಯಾತ್ಸಂದ್ರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ವಿ.ಸೋಮಣ್ಣ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಚಿವ ಸೋಮಣ್ಣನವರು ಭಾಗವಹಿಸಿ ಅಭಿಮಾನಿಗಳಿಂದ ಜನ್ಮದಿನದ ಶುಭಾಶಯ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಸಚಿವ ಸೋಮಣ್ಣ, ನಾನು ಯವತ್ತೂ ಹುಟ್ಟು ಹಬ್ಬ ಆಚರಣೆಗೆ ಶಾಲಾ ಮಕ್ಕಳನ್ನು ಬಳಸಿಕೊಂಡಿಲ್ಲ, ಆದರೆ ಶಾಲಾ ಮಕ್ಕಳಿಗೆ ಸಹಿ ಕಳುಹಿಸಿಕೊಟ್ಟು ಆನಂದಪಟ್ಟಿದ್ದೆ. ಈ ಬಾರಿ ಈ ಶಾಲಾ ಮಕ್ಕಳ ಜೊತೆ ಭಾಗವಹಿಸಲು ಅವಕಾಶ ಸಿಕ್ಕಿದೆ ಎಂದರು.

ಬೆಂಗಳೂರು ಕಡೆಯಿಂದ ತುಮಕೂರು ನಗರ ಪ್ರವೇಶಿಸುವ ಭಾಗದಲ್ಲಿ ಆಕರ್ಷಕ ಮಹಾದ್ವಾರ ನಿರ್ಮಾಣ ಮಾಡುವ ಸಂಬಂಧ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ಸೋಮಣ್ಣ ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಭಾರತವನ್ನು ಮುನ್ನಡೆಸುವ ಹೊಣೆಗಾರಿಕೆ ಮಕ್ಕಳ ಮೇಲಿದೆ. ಶಿಕ್ಷಕರು ಮಕ್ಕಳಲ್ಲಿ ದೇಶಪ್ರೇಮ ಮೂಡಿಸಿ, ಜವಾಬ್ದಾರಿಯುತ ಪ್ರಜೆಗಳನ್ನಾಗಿ ರೂಪಿಸಿಬೇಕು ಎಂದು ಸಲಹೆ ಮಾಡಿದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಕ್ಯಾತ್ಸಂದ್ರದ ಈ ಶಾಲೆಗೆ 123 ವರ್ಷ ತುಂಬಿದೆ. ಅನೇಕ ಮಹನೀಯರು ಈ ಶಾಲೆಯಲ್ಲಿ ಓದಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆದಿದ್ದಾರೆ. ಈ ಶಾಲೆಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಕರ್ಯ ಮಾಡಿಕೊಡುವುದಾಗಿ ಹೇಳಿದರು.

ಗ್ರಾಮಾಂತರ ಕ್ಷೇತ್ರ ಶಾಸಕ ಬಿ.ಸುರೇಶ್‍ಗೌಡರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಬಿಜೆಪಿ ಮುಖಂಡ ಎಸ್.ಪಿ.ಚಿದಾನಂದ್, ಡಿಡಿಪಿಐ ಮಂಜುನಾಥ್, ನಗರ ಪಾಲಿಕೆ ಮಾಜಿ ಸದಸ್ಯರು, ವಿವಿಧ ಸಂಘಸಂಸ್ಥೆಗಳ ಪ್ರಮುಖರು, ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆ.ಅರವಿಂದ್, ಮುಖಂಡರಾದ ಯಜಮಾನ್ ಗಂಗಹನುಮಯ್ಯ, ಶಿವರಾಜ್, ರತ್ನಮ್ಮ, ಅನ್ಸರ್ ಪಾಷ, ದಯಾನಂದ್, ಸತ್ಯಣ್ಣ, ನಾಗೇಶ್ ಮೊದಲಾದವರು ಭಾಗವಹಿಸಿದ್ದರು.

ಈ ವೇಳೆ ಸಚಿವ ವಿ.ಸೋಮಣ್ಣ ಅವರು ನಗರ ಪಾಲಿಕೆಯ ಪೌರಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಿದರು. ಶಾಲಾ ಮಕ್ಕಳಿಗೆ ನೋಟ್ ಪುಸ್ತಕ, ಟೈ, ಬೆಲ್ಟ್, ಸಿಹಿ ವಿತರಿಸಲಾಯಿತು.

ಕನ್ನಡ ಸೇನೆ.

ಕೇಂದ್ರ ಸಚಿವ ವಿ.ಸೋಮಣ್ಣ ಅವರ 74ನೇ ಹುಟ್ಟು ಹಬ್ಬದ ಅಂಗವಾಗಿ ಕನ್ನಡಸೇನೆ ಜಿಲ್ಲಾಧ್ಯಕ್ಷ ಧನಿಯಕುಮಾರ್ ನೇತೃತ್ವದಲ್ಲಿ ಶ್ರೀಸಿದ್ದಗಂಗಾ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಮತ್ತು ವೃಕ್ಷಮಿತ್ರ ಯೋಜನೆ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಟೌನ್‍ಹಾಲ್ ಮುಂಭಾಗದಲ್ಲಿ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವರ 74ನೇ ಹುಟ್ಟು ಹಬ್ಬದ ಅಂಗವಾಗಿ ಸಚಿವ ವಿ.ಸೋಮಣ್ಣ ಅವರಿಗೆ ವಕೀಲ ಪಾವಗಡ ಶ್ರೀರಾಮ್,ಸಂಸತ್ ಅಧಿವೇಶನದಲ್ಲಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಂತೆ ಸಂವಿಧಾನ ಪುಸ್ತಕವನ್ನು ನೀಡಿ ಶುಭ ಕೋರಿದರೆ,ಎಸ್.ಬಿ.ಐನ ನಿವೃತ್ತ ಅಧಿಕಾರಿ ಕೊಪ್ಪಲ್ ನಾಗರಾಜು ನಗರಪಾಲಿಕೆಯ ಪೌರಕಾರ್ಮಿಕರ 12 ಜನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಓದುತ್ತಿರುವ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನವನ್ನು ವಿತರಿಸಿದರು.ಕನ್ನಡ ಸೇನೆ ಹಾಗೂ ವಿವಿದ ಕನ್ನಡಪರ ಸಂಘಟನೆಗಳ ಮುಖಂಡರುಗಳು ರಕ್ತದಾನ ಮಾಡಿ, ಸೋಮಣ್ಣ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿದರು.

ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಹಾಗೂ ವೃಕ್ಷಮಿತ್ರ ನೇರವಿನೊಂದಿಗೆ ಪ್ರೊ.ಬೇವಿನಮರದ ಸಿದ್ದಪ್ಪ ಅವರ ನೇತೃತ್ವದಲ್ಲಿ, ಡಾ.ರಮಣ ಹುಲಿನಾಯ್ಕರ್,ಅಂಬಿಕಾ ಹುಲಿನಾಯ್ಕರ್ ಹಾಗೂ ಇನ್ನಿತರ ಪ್ರಮುಖರು 74 ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನಗರಪಾಲಿಕೆ ಪಾರ್ಕು ಹಾಗೂ ನಗರದ ವಿವಿಧಡೆಗಳಲ್ಲಿ ನಡೆಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬೆಳ್ಳಾವೆಯ ಶ್ರೀಕಾರದೇಶ್ವರ ಮಠದ ಶ್ರೀಕಾರದ ವೀರಬಸವಸ್ವಾಮೀಜಿ ವಹಿಸಿದ್ದರು.ಮಾಜಿ ಸಚಿವ ಎಸ್.ಶಿವಣ್ಣ,ಪಂಚಾಕ್ಷರಯ್ಯ, ಶಬ್ಬೀರ ಅಹಮದ್,ಕೊಪ್ಪಲ್ ನಾಗರಾಜು,ವೆಂಕಟಾಚಲ,ದಿಲೀಪ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *