ತುಮಕೂರು ಲೋಕಸಭೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ

ತುಮಕೂರು : ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಲೋಕಸಭಾ ಅಭ್ಯರ್ಥಿ ಯಾಗಿ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಟಿಕೆಟ್ ನೀಡಿದ್ದಾರೆ.

ಇದರಿಂದ ಜಿಲ್ಲೆಯ ಲ್ಲಿ ಜಿ.ಎಸ್.ಬಸವರಾಜು ಅವರು ಮೇಲುಗೈ ಸಾಧಿಸಿದ್ದು, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಯವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಯ ಹಸ್ತ ನೀಡಿದ್ದು ಹುಸಿಯಾಗಿದೆ.

ಬಿಜೆಪಿಯ ಒಟ್ಟು 8 ಹಾಲಿ ಸದಸ್ಯರಿಗೆ ಈ ಬಾರಿ ಟಿಕೆಟ್‌ ತಪ್ಪಿದೆ. ಪ್ರತಾಪ್‌ ಸಿಂಹ, ಡಿವಿ ಸದಾನಂದ ಗೌಡ, ಕರಡಿ ಸಂಗಣ್ಣ, ಶಿವಕುಮಾರ್‌ ಉದಾಸಿ, ಜಿಎಸ್‌ ಬಸವರಾಜು ಅವರಿಗೆ ಟಿಕೆಟ್‌ ತಪ್ಪಿದೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಯಾರು ನಾಯಕರಾಗುತ್ತಾರೆ ಎಂಬ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್‌ಗಳ ಕ್ಷೇತ್ರವನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಪ್ರಮುಖವಾಗಿ ತುಮಕೂರು ಕ್ಷೇತ್ರದಿಂದ ವಿ. ಸೋಮಣ್ಣ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 2ನೇ ಪಟ್ಟಿಯಲ್ಲಿ ಲೋಕಸಭೆಗೆ ಒಟ್ಟು 72 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ.
ನಳಿನ್ ಕುಮಾರ್‌ ಕಟೀಲ್‌ಗೆ ದಕ್ಷಿಣ ಕನ್ನಡ, ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್‌ ಸಿಂಹ, ಕೊಪ್ಪಳದಿಂದ ಕರಡಿ ಸಂಗಣ್ಣ, ಬೆಂಗಳೂರು ಉತ್ತರದಿಂದ ಸದಾನಂದ ಗೌಡ, ಬಳ್ಳಾರಿಯಲ್ಲಿ ದೇವೇಂದ್ರಪ್ಪ ಅವರಿಗೆ ಟಿಕೆಟ್‌ ನಿರಾಕರಿಸಲಾಗಿದ್ದರೆ, ಚಾಮರಾಜನಗರದಲ್ಲಿ ಶ್ರೀನಿವಾಸ್‌ ಪ್ರಸಾದ್‌, ಹಾವೇರಿಯಲ್ಲಿ ಸಿಎಂ ಉದಾಸಿ, ತುಮಕೂರಿನಲ್ಲಿ ಜಿಎಸ್‌ ಬಸವರಾಜ್‌ ಹಾಗೂ ದಾವಣಗೆರೆಯಲ್ಲಿ ಜಿಎಂ ಸಿದ್ಧೇಶ್ವರ ನಿವೃತ್ತಿ ಘೋಷಣೆ ಮಾಡಿರುವ ಕಾರಣ ಬೇರೆಯವರಿಗೆ ಟಿಕೆಟ್‌ ನೀಡಲಾಗಿದೆ.

ಚಿಕ್ಕೋಡಿಯಿಂದ -ಅಣ್ಣಾ ಸಾಹೇಬ್ ಜೊಲ್ಲೆ

ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ PC ಗದ್ದಿಗೌಡರ

ವಿಜಯಪುರದಿಂದ ರಮೇಶ ಜಿಗಜಣಗಿ
ಹಾವೇರಿಯಿಂದ ಬಸವರಾಜ ಬೊಮ್ಮಾಯಿ

ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ

ಮೈಸೂರಿನಿಂದ ಯದುವೀರ್ ಒಡೆಯರ್

ತುಮಕೂರಿನಿಂದ ವಿ. ಸೋಮಣ್ಣ

ಚಾಮರಾಜನಗರದಿಂದ ಎಸ್. ಬಾಲರಾಜು

ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಗಾಯಿತ್ರಿ ಸಿದ್ದೇಶ್ವರ

ದಕ್ಷಿಣ ಕನ್ನಡದಿಂದ ಬ್ರಿಜೇಶ್ ಚೌಟಾ

ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್. ಮಂಜುನಾಥ್

ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಪಿ.ಸಿ. ಮೋಹನ್

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಹ್ಲಾದ್ ಜೋಶಿ

ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಡಾ. ಬಸವರಾಜ ತ್ಯಾವಟೂರ

ಶಿವಮೊಗ್ಗದಿಂದ ಬಿ.ವೈ. ರಾಘವೇಂದ್ರ

ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿ. ಶ್ರೀರಾಮುಲು

ಕಲಬುರಗಿಯಿಂದ ಡಾ. ಉಮೇಶ್ ಜಾಧವ್

ಬೀದರ್ ನಿಂದ ಭಗವಂತ ಖೂಬಾ ಅಭ್ಯರ್ಥಿಗಳಾಗಿದ್ದಾರೆ.

Leave a Reply

Your email address will not be published. Required fields are marked *