13ರಂದು ವೀಚಿ ಸಾಹಿತ್ಯ ಪ್ರಶಸ್ತಿ ಪ್ರದಾನ

ತುಮಕೂರು: ನಗರದ ವೀಚಿ ಪ್ರತಿಷ್ಠಾನ ಕೊಡಮಾಡುವ ವೀಚಿ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಈ ತಿಂಗಳ 13ರಂದು ಬೆಳಿಗ್ಗೆ 11 ಗಂಟೆಗೆ ನಗರದ ರವೀಂದ್ರ ಕಲಾನಿಕೇತನ ಸಭಾಂಗಣದಲ್ಲಿ ಏರ್ಪಾಟಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾರ್ಯಕ್ರಮ ಉದ್ಘಾಟನೆ ಮಾಡುವರು.

ಈ ಬಾರಿ ವೀಚಿ ಸಾಹಿತ್ಯ ಪ್ರಶಸ್ತಿಯನ್ನು ಪಿ.ಚಂದ್ರಿಕಾ ಅವರ ‘ಮೂವರು ಮಹಮದರು’ ಕೃತಿಗೆ, ಡಾ.ಗೋವಿಂದರಾಜು ಎಂ.ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕೃತಿಗೆ ವೀಚಿ ಯುವ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ವೇಳೆ ದುಗ್ಗೇನಹಳ್ಳಿಯ ಜಯರಾಮಯ್ಯ ಅವರಿಗೆ ವೀಚಿ ಜನಪದ ಪ್ರಶಸ್ತಿ ಹಾಗೂ ಸಮಾಜ ಸೇವಕಿ ತಾಹೆರಾ ಕುಲ್ಸಮ್ ಅವರಿಗೆ ವೀಚಿ ಕನಕ ಕಾಯಕ ಪ್ರಶಸ್ತಿ ವಿತರಣೆ ಮಾಡಲಾಗುವುದು. ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಪ್ರಶಸ್ತಿ ಪ್ರದಾನ ಮಾಡುವರು.

ಸಾಹಿತಿ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಆಶಯ ನುಡಿ ನುಡಿಯುವರು. ವೀಚಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಸ್.ನಾಗಣ್ಣ ಅಧ್ಯಕ್ಷತೆ ವಹಿಸುವರು. ಸಾಹಿತಿ ಡಾ.ಬಸವರಾಜ ಸಾದರ, ಕತೆಗಾರ ತುಂಬಾಡಿ ರಾಮಯ್ಯ, ರಂಗಕರ್ಮಿ ಡಾ.ಬೇಲೂರು ರಘುನಂದನ್, ಬಾಪೂಜಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ.ಬಸವಯ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಎಂ.ಎಚ್.ನಾಗರಾಜು ತಿಳಿಸಿದ್ದಾರೆ.

Leave a Reply

Your email address will not be published. Required fields are marked *