ತುಮಕೂರು : ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ ‘ಹಿಂದು’ ಧರ್ಮೀಯ ಅಲ್ಲ ಎಂದು ಅಖಿಲ ಭಾರತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ ಹೇಳಿದ್ದಾರೆ.
ಅವರು ತುಮಕೂರಿನ ಅರ್ಬನ್ ರೆಸಾರ್ಟ್‍ನಲ್ಲಿ ಗುರುವಾರ ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜೈನ, ಬೌದ್ಧ, ಸಿಖ್ ಧರ್ಮದಂತೆ ವೀರಶೈವ-ಲಿಂಗಾಯಿತ ಧರ್ಮವೂ ಪ್ರತೇಕ ಧರ್ಮ ಎಂದ ನಟರಾಜ ಸಾಗರನಹಳ್ಳಿ ಅವರು, ಕೇವಲ ರಾಜಕೀಯ ಲಾಭಕ್ಕಾಗಿ ಯಡಿಯೂರಪ್ಪ ತಾವೊಬ್ಬ ಹಿಂದು ಧರ್ಮೀಯ ಎಂದು ಹೇಳಿಕೊಳ್ಳುತ್ತಾ ಬಂದಿದ್ದಾರೆಂದು ಮಾರ್ಮಿಕವಾಗಿ ನುಡಿದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ನಟರಾಜ ಅವರು, ವೀರಶೈವ-ಲಿಂಗಾಯಿತ ಧರ್ಮವು 12ನೇ ಶತಮಾನದಲೇ ಪ್ರತ್ಯೇಕ ಧರ್ಮವೆಂದು ಗುರುತಿಸಿಕೊಂಡಿದೆ. ವೀರಶೈವ-ಲಿಂಗಾಯತ ಸ್ವತಂತ್ರ ಧರ್ಮವÉಂದು ಅದು ಹಿಂದೂ ಧರ್ಮದ ಭಾಗವಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ಒಂದು ಧರ್ಮವಾಗಿರುವುದರಿಂದ ನಮಗೂ ಜೈನ, ಬೌದ್ಧ, ಸಿಖ್ ಧರ್ಮದಂತೆ ಪ್ರತ್ಯೇಕÀ ಧರ್ಮವಾಗಿ ವೀರಶೈವ-ಲಿಂಗಾಯತ ಧರ್ಮವನ್ನು ಗುರುತಿಸುವಂತೆ ಈಗಾಗಲೇ ಸಂಬಂಧಪಟ್ಟ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.
ಈಗ ಹಿಂದು ಮತ್ತು ಹಿಂದುತ್ವದ ಬಗ್ಗೆ ರಾಜ್ಯದಲ್ಲಿ ಏರುಗತಿಯಲ್ಲಿ ಚರ್ಚೆಗಳು ನಡೆಯುತ್ತಿದ್ದು, ಹಿಂದು ಧರ್ಮದ ಬಗ್ಗೆ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆಯೊಂದು ವಿವಾದ ಉಂಟಾದ ಬೆನ್ನಲ್ಲೇ ಅಖಿಲ ಭಾರತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ ಅವರು ವೀರಶೈವ-ಲಿಂಗಾಯಿತ ಧರ್ಮವು ಹಿಂದು ಧರ್ಮವಲ್ಲ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ,ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಮೋಹನ್‍ಕುಮಾರ್ ಪಟೇಲ್,ಪ್ರಚಾರ ಸಮಿತಿ ಅಧ್ಯಕ್ಷ ಶಿವಕುಮಾರ್,ಮುಕ್ತಾಂಭ ಬಸವರಾಜು,ಪಾವರ್ತಿ ರೆಡ್ಡಿ,ಶ್ರೀಕಂಠಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.