ಚುನಾವಣಾ ಕಾರ್ಯಕ್ಕೆ ತೆರಳಲು ವಾಹನ ವ್ಯವಸ್ಥೆ

   ತುಮಕೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯಕ್ಕೆ ನೇಮಿಸಿರುವ ಮತಗಟ್ಟೆ ಅಧಿಕಾರಿ-ಸಿಬ್ಬಂದಿಗಳು ಏಪ್ರಿಲ್ 26ರ ಮತದಾನ ದಿನದಂದು ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ತೆರಳಲು ಅನುವಾಗುವಂತೆ ಆಯಾ ತಾಲ್ಲೂಕು ಕೇಂದ್ರಸ್ಥಾನದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. 

 ಚುನಾವಣಾ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವ ದೃಷ್ಟಿಯಿಂದ ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುವ ತಾಲ್ಲೂಕು ಕೇಂದ್ರ ಸ್ಥಾನದಿಂದ ಅವರನ್ನು ನೇಮಕ ಮಾಡಿದ ವಿಧಾನಸಭಾ ಕ್ಷೇತ್ರಗಳಿಗೆ ಕಳುಹಿಸಿಕೊಡಲು ಏಪ್ರಿಲ್ 25ರಂದು ಬೆಳಿಗ್ಗೆ 6 ಗಂಟೆಗೆ ವಾಹನ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ವಾಹನ ವ್ಯವಸ್ಥೆಯ ಪ್ರಯೋಜನ ಪಡೆದು ನೇಮಕವಾದ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ಹೋಗಲು ತಿಳಿಸಲಾಗಿದೆ.  ವಾಹನ ಹೊರಡುವ ಸ್ಥಳಗಳ ವಿವರ ಈ ಕೆಳಕಂಡಂತಿದೆ. 

ವಾಹನ ಹೊರಡುವ ಸ್ಥಳ :-

ತುಮಕೂರು ಗ್ರಾಮಾಂತರ : ವಿಜಯನಗರದಲ್ಲಿರುವ ಸರ್ವೋದಯ ಪ್ರೌಢಶಾಲೆ ಹಾಗೂ ಸೋಮೇಶ್ವರ ಬಾಲಕಿಯರ ಪ್ರೌಢಶಾಲೆ; ತುಮಕೂರು ನಗರ : ಬಿ.ಹೆಚ್.ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು; ಗುಬ್ಬಿ : ಮಾರನಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು; ಚಿಕ್ಕನಾಯಕನಹಳ್ಳಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು; ತಿಪಟೂರು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು; ತುರುವೇಕೆರೆ ಸರ್ಕಾರಿ ಜೂನಿಯರ್ ಕಾಲೇಜು; ಕುಣಿಗಲ್ ಪಟ್ಟಣದ ಮಹಾತ್ಮಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜು; ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು; ಶಿರಾ : ಜ್ಯೋತಿನಗರದ ಸರ್ಕಾರಿ ಪ್ರಥಮ ದರ್ಜೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು; ಪಾವಗಡ ಸರ್ಕಾರಿ ಪದವಿ ಪೂರ್ವ ಕಾಲೇಜು; ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವಾಹನ ಹೊರಡಲಿದ್ದು, ನಿಗಧಿತ ಸಮಯಕ್ಕೆ ಸರಿಯಾಗಿ ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ವಾಹನ ಹೊರಡುವ ಸ್ಥಳದಲ್ಲಿ ಹಾಜರಿರಬೇಕು ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *