ತುಮಕೂರು : ರೈತ-ಕೃಷಿಕಾರರ ಮನೆ ನಿವೇಶನ, ಭೂಮಿ ಹಕ್ಕಿಗಾಗಿ, ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ, ಎಂ.ಎಸ್.ಪಿ ಹಾಗೂ ಸಾಲ ಮನ್ನಾ ಹಕ್ಕಿಗಾಗಿ ಫೆಬ್ರವರಿ 10 ರಿಂದ ಬೃಹತ್ ವಿಧಾನಸೌಧ ಚಲೋ-ಅನಿರ್ಧಿಷ್ಠಾವದಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧ್ಯಕ್ಷ ಆರ್.ಎಸ್. ಚನ್ನಬಸವಣ್ಣ ತಿಳಿಸಿದರು.
ಅವರು ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ರೈತ ಹಾಗೂ ಜನ ವಿರೋಧಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ವಿರೋಧಿಸಿ, ಮನೆ-ನಿವೇಶನ, ಬಗರ್ ಹುಕುಂ -ಅರಣ್ಯ ಸಾಗುವಳಿ ರೈತ-ಕೂಲಿಕಾರರ ಹಕ್ಕು ರಕ್ಷಣೆಗಾಗಿ, ಬಲವಂತದ ಭೂ ಸ್ವಾಧೀನ ಹಾಗೂ ಭೂ ಸಂಪತ್ತಿನ ಕಾಪೆರ್Çರೇಟ್ ಲೂಟಿ ಹಿಮ್ಮೆಟ್ಟಿಸಲು ಈ ಆಂದೋಲನ ನಡೆಸಲಾಗುತ್ತಿದೆ ಎಂದರು.
ಜನ ವಿರೋಧಿ ಕರಾಳ ರಾಜ್ಯ ಕೃಷಿ, ಕಂದಾಯ ಹಾಗೂ ಭೂ ಸ್ವಾಧೀನ ಕಾಯ್ದೆಗಳ ರದ್ದತಿಗಾಗಿ, ಸಾಲಮನ್ನಾ ಹಾಗೂ ಕನಿಷ್ಟ ಬೆಂಬಲ ಬೆಲೆ ಹಕ್ಕಿಗಾಗಿ,ಕಿರುಕುಳ-ಲಂಚ ಇಲ್ಲದೇ ದರ್ಖಾಸ್ತ್ ಮಂಜೂರು ಹಾಗೂ ಇತರೆ ಭೂಮಿಗಳ ದುರಸ್ತ್ ಪೆÇೀಡಿ ಮಾಡಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆ.ಪಿ.ಆರ್.ಎಸ್) ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU) ರಾಜ್ಯ ಸಮಿತಿಗಳು ರೈತ-ಕೂಲಿಕಾರರ ಬೃಹತ್ ವಿಧಾನ ಸೌಧ ಚಲೋ ಹಾಗೂ ಅನಿರ್ಧಿಷ್ಠಾವಧಿ ಧರಣಿಯನ್ನು ಪೆಬ್ರವರಿ 10,2025 ರಿಂದ ಹಮ್ಮಿಕೊಂಡಿದ್ದು ಜಿಲ್ಲಾದ್ಯಾಂತ 4000 ರೈತ ಕೂಲಿಕಾರರು ಭಾಗವಹಿಸುತ್ತಿದ್ದಾರೆ ಎಂದು ಆರ್.ಎಸ್.ಚನ್ನಬಸವಣ್ಣ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಬಗರ್‍ಹುಕುಂ ಸಾಗುವಳಿ ಸಕ್ರಮ ಕೋರಿ ಅರ್ಜಿ ಸಲ್ಲಿಸಿರುವ ರೈತರ ನ್ಯಾಯಬದ್ದ ಕೋರಿಕೆಯನ್ನು ಸಮರೋಪಾಧಿಯಲ್ಲಿ ತಿರಸ್ಕರಿಸಲಾಗಿದೆ. ರಾಜ್ಯದಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿ ಮನೆ-ನಿವೇಶನ ಕೋರಿ ,ಸರ್ಕಾರಿ ಭೂಮಿಗಳಲ್ಲಿ ಕಟ್ಟಿಕೊಂಡಿರುವ ಮನೆಗಳನ್ನು ಸಕ್ರಮಗೊಳಿಸಲು ಕೋರಿ 94C, 94CC. ಅರ್ಜಿ ಸಲ್ಲಿಸಿರುವ ಬಡವರು, ಪಾರಂ ನಂ 50,53,57 ರಲ್ಲಿ ತಮ್ಮ ಬಗರ್ ಹುಕುಂ ಸಾಗುವಳಿ ಸಕ್ರಮ ಕೋರಿ ಅರ್ಜಿ ಸಲ್ಲಿಸಿರುವ ರೈತರ ನ್ಯಾಯಬದ್ಧವಾದ ಕೋರಿಕೆಯನ್ನು ಸಮರೋಪಾದಿಯಲ್ಲಿ ತಿರಸ್ಕರಿಸಲಾಗುತ್ತಿದೆ. ಈ ರೈತ-ಕೂಲಿಕಾರರ ಮನೆ-ನಿವೇಶನ, ಭೂಮಿ ಹಕ್ಕನ್ನು ಖಾತರಿಪಡಿಸಬೇಕಾಗಿದ್ದ ಸರ್ಕಾರ ವಿವಿಧ ರೀತಿಯ ನೆಪಗಳನ್ನು ಮುಂದು ಮಾಡಿ ರಾಜ್ಯದಾದ್ಯಂತ ದೊಡ್ಡ ಪ್ರಮಾಣದಲ್ಲಿ ಒಕ್ಕಲೆಬ್ಬಿಸಲಾಗುತ್ತಿದೆ. ಈಗಾಗಲೇ ಮಂಜೂರಾಗಿದ್ದು ದುರಸ್ತ್ (ಪೆÇೀಡಿ) ಆಗದೇ ಇರುವ ರೈತರ ಭೂಮಿಯನ್ನು ಸಹ ಕಿತ್ತುಕೊಳ್ಳುತ್ತಿದೆ. ಸಕ್ರಮಾತಿ ಸಮಿತಿಯ ಅಧಿಕಾರವನ್ನು ಕಂದಾಯ ಇಲಾಖೆ ಅಧಿಕಾರಿಗಳೇ ಚಲಾಯಿಸಿ ಬಗರ್ ಹುಕುಂ ಸಾಗುವಳಿ ಸಕ್ರಮ ಅರ್ಜಿಗಳನ್ನು ಅನರ್ಹ ಎಂದು ತಿರಸ್ಕರಿಸುತ್ತಿರುವುದು ಕರ್ನಾಟಕ ಭೂ ಕಂದಾಯ ಕಾಯ್ದೆ 94(ಎ) ,94(ಬಿ) ಕಲಂಗಳ ಸ್ಪಷ್ಟ ಉಲ್ಲಂಘನೆ ಯಾಗಿದೆ ಮತ್ತು ಕಾನೂನು ಬಾಹಿರವಾಗಿದೆ ಎಂದು ದೂರಿದರು.
ಕರ್ನಾಟಕ ಪ್ರಾಂತ ರೈತ ಸಂಘ (ಕೆ.ಪಿ.ಆರ್.ಎಸ್) ಜಿಲ್ಲಾ ಕಾರ್ಯದರ್ಶಿ ಎನ್.ಕೆ. ಸುಬ್ರಮಣ್ಯ ಮಾತನಾಡಿ ಜಿಲ್ಲೆಯ ಅರಣ್ಯ ಭೂಮಿ ಇಂಡೀಕರಣ, ಗೋಮಾಳ, ಭೂಹೀನ ರೈತರಿಗೆ ನಿವೇಶನ, ಗೋಮಾಳ ಭೂಮಿಯನ್ನು ಭೂರಹಿತರಿಗೆ ಮತ್ತು ಅರ್ಜಿ ಹಾಕಿರುವ ಯಾವುದೇ ಅರ್ಜಿಗಳನ್ನು ವಜಾಮಾಡಬಾರದು, ನಿವೇಶನ ರಹಿತರಿಗೆ ನಿವೇಶನ ಕೊಡಬೇಕು, 20-30 ವರ್ಷಗಳ ಹಿಂದೆ ಮಂಜೂರಾಗಿರುವ ಜಮೀನುಗಳ ಪೋಡಿ ದುರಸ್ತಿ ಆಗಬೇಕು, ಶಿರಾ ತಾಲ್ಲೂಕು ಗೌಡಗೆರೆ ಹೋಬಳಿಯ ಉಜ್ಜನಕುಂಟೆ ವ್ಯಾಪ್ತಿಯಲ್ಲಿ ಬರುವ ಬಗರ್ ಹುಕ್ಕಂ ಸಾಗುವಳಿದಾರರ ಜಮೀನನ್ನು 1000 ಸಾವಿgಹೇರಿಟೇಜ್ ಕಂಪನಿಗೆಭೂಸ್ವಾಧಿನ ಮಾಡಿಕೂಳ್ಳಲು ಕೆ.ಐ.ಡಿ.ಬಿ ಯಿಂದ ಸಿದ್ದತೆ ಮಾಡಿಕೂಂಡಿದೆ. ತುರುವೇಕೆರೆ ತಾಲ್ಲೂಕಿನ ಅಮ್ಮಸಂದ್ರ ಮೈಸೂರು ಸಿಮೆಂಟ್ಸ್ ಕಾರ್ಖಾನೆಯ ಲೀಸ್‍ನಲ್ಲಿರುವ ಬಳಕೆಯಾಗದ ಸುಮರು 600 ಎಕರೆ ಜಮೀನು ಅಕ್ಕಪಕ್ಕ ಹಳ್ಳಿಗಳ ಭೂ ರಹಿತರಿಗೆ ಕೊಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘ (ಕೆ.ಪಿ.ಆರ್.ಎಸ್) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ಅಜ್ಜಪ್ಪ ಮಾತನಾಡಿ ಅಲ್ಲದೇ, ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ರಾಜ್ಯದಾದ್ಯಂತ ಇರುವ ಲಕ್ಷಾಂತರ ಎಕರೆ ಸರ್ಕಾರಿ ಕಂದಾಯ ಭೂಮಿಗಳನ್ನು ಪರಿಭಾವಿಸಲ್ಪಟ್ಟ ಅರಣ್ಯ ವ್ಯಾಪ್ತಿಗೆ ವರ್ಗಾಯಿಸಲಾಗಿದೆ. ಈ ರೀತಿ ವರ್ಗಾಯಿಸಲ್ಪಟ್ಟ ಭೂಮಿಗಳನ್ನು ಅರಣ್ಯ ಇಲಾಖೆಯೂ ತನ್ನ ಹೆಸರಿಗೆ ಇಂಡೀಕರಣ ಮಾಡಿಸಿಕೊಂಡು ಪೆÇಲೀಸ್ ರಕ್ಷಣೆಯಲ್ಲಿ ಒಕ್ಕಲೆಬ್ಬಿಸುತ್ತಿರುವುದು ತೀವ್ರ ಗತಿಯಲ್ಲಿ ನಡೆಯುತ್ತಿದೆ. ಇಂತಹ ಯಾವುದೇ ಸಂದರ್ಭದಲ್ಲೂ ರೈತರ ಬಗರ್ ಹುಕುಂ ಸಾಗುವಳಿ ಸಕ್ರಮ ಕೋರಿರುವ ಅರ್ಜಿಗಳನ್ನಾಗಲಿ ಅಥವಾ ಈಗಾಗಲೇ ಮಂಜೂರಾಗಿ ನಮೂದಾಗಿರುವ ಹಕ್ಕು ದಾಖಲೆಗಳ ಕಂದಾಯ ದಾಖಲೆಗಳನ್ನಾಗಲಿ ಪರಿಗಣನೆಗೆ ತೆಗೆದುಕೊಳ್ಳದೇ ರಾತ್ರೋ ರಾತ್ರಿ ಬೃಹತ್ ಜೆಸಿಬಿ ಯಂತ್ರಗಳ ಮೂಲಕ ಫಸಲು ನಾಶ ಪಡಿಸಲಾಗುತ್ತಿದೆ. ಹಳೇ ಮೈಸೂರು ಭಾಗದಲ್ಲಿ 1920 ದಶಕದ ಮೈಸೂರು ಮಹಾರಾಜರ ಗೆಜೆಟ್ ಪ್ರಕಟಣೆಯನ್ನು ಮುಂದು ಮಾಡಿ ಭೂಮಿ ಕಿತ್ತುಕೊಳ್ಳಲು ಬಳಸುತ್ತಿದ್ದರೆ, ಹಿಂದಿನ ಮದ್ರಾಸ್ ಪ್ರೆಸಿಡೆನ್ಸಿ ಪ್ರದೇಶಗಳಲ್ಲಿ ಮದ್ರಾಸ್ ಗೆಜೆಟ್ ಅಧಿಸೂಚನೆ 1890 ಅನ್ನು ಬಳಸಲಾಗುತ್ತಿದೆ. ಹೀಗೆ ಸುಮಾರು ನೂರು ವರ್ಷಗಳ ಹಿಂದಿನ ಅಂದರೆ ಸ್ವತಂತ್ರ ಪೂರ್ವದ ದಾಖಲಾತಿಗಳನ್ನು ಮುಂದು ಮಾಡಿ ರೈತರನ್ನು ಬೆದರಿಸಲಾಗುತ್ತಿದೆ. ಇಂತಹ ಎಲ್ಲಾ ಸಂದರ್ಭಗಳಲ್ಲೂ ಜಿಲ್ಲಾಧಿಕಾರಿಗಳಾಗಲಿ ಅಥವಾ ಸರ್ಕಾರವಾಗಲಿ ರೈತರ ರಕ್ಷಣೆಗೆ ಬರುತ್ತಿಲ್ಲ. ಕೋರ್ಟ್ ತೀರ್ಪು, ಅರಣ್ಯ ಕಾಯ್ದೆಗಳ ಕಡೆ ಬೆರಳು ತೋರಿ ಅರಣ್ಯ ಇಲಾಖೆಯ ರೈತ ವಿರೋಧಿ ಕ್ರಮಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಆರ್‍ಎಸ್‍ನ ಜಿಲ್ಲಾ ಉಪಾಧ್ಯಕ್ಷರಾದ ದೊಡ್ಡನಂಜಯ್ಯ, ರಾಜಮ್ಮ ಕೆ.ಎಂ, ತುರುವೇಕೆರೆಯ ಬೋಜರಾಜು, ಹಾಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.