ತುಮಕೂರು : ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷರನ್ನಾಗಿ ಮಧುಗಿರಿ ತಾಲ್ಲೂಕು ದೊಡ್ಡೇರಿ ಗ್ರಾಮಪಂಚಾಯತಿ ಸದಸ್ಯರಾದ ವಿಜಯ ಪ್ರಕಾಶ್ ಅವರನ್ನು ನೇಮಕ ಮಾಡಿರುವುದಾಗಿ ಪಂಚಾಯತಿ ಸದಸ್ಯರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕಾಡಶೆಟ್ಟಿಹಳ್ಳಿ ಸತೀಶ್ ತಿಳಿಸಿದ್ದಾರೆ.

ಬೆಂಗಳೂರಿನ ಕುಮಾರ ಪಾರ್ಕ್ ಪೂರ್ವದಲ್ಲಿರುವ ಗಾಂಧಿ ಭವನದಲ್ಲಿ ನಡೆದ ಮಹಾ ಒಕ್ಕೂಟದ ರಾಜ್ಯ ಸಮಿತಿ ಸಭೆಯಲ್ಲಿ ಕಳೆದ ಎರಡುವರೆ ವರ್ಷಗಳ ರಾಜ್ಯದ ವಿವಿಧ ಜಿಲ್ಲೆಗಳ ಮತ್ತು ರಾಜ್ಯದ ಪದಾಧಿಕಾರಿಗಳ ಕಾರ್ಯ ಚಟುವಟಿಕೆಗಳನ್ನು ಪರಾಮರ್ಶಿಸಿ ರಾಜ್ಯದಲ್ಲಿ ಗ್ರಾಮ ಪಂಚಾಯತಿಗಳು ಸ್ಥಳಿಯ ಸ್ವಯಂ ಸರ್ಕಾರಗಳಾಗಿ ಕಾರ್ಯ ನಿರ್ವಹಿಸುವಂತಹ ವಾತವರಣವನ್ನು ಸೃಷ್ಟಿ ಮಾಡುವ ನಿಟ್ಟಿನಲ್ಲಿ “ಗ್ರಾಮ ಸ್ವರಾಜ್ಯ ಕರ್ನಾಟಕ ಅಭಿಯಾನ”ವನ್ನು ಪರಿಣಮಕಾರಿಯಾಗಿ ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲು ತಿರ್ಮಾನಿಸಿದ ಹಿನ್ನಲೆಯಲ್ಲಿ ರಾಜ್ಯ ಸಮಿತಿಯನ್ನು ಪುನರ್ ರಚಿಸಲು ತಿರ್ಮಾನಿಸಿ ವಿಜಯ ಪ್ರಕಾಶ್ ಅವರನ್ನು ತುಮಕೂರು ಜಿಲ್ಲೆಯ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಕಾಡಶೆಟ್ಟಹಳ್ಳಿ ಸತೀಶ್ ತಿಳಿಸಿದ್ದಾರೆ.