ಜಿಲ್ಲೆಯ 40 ಬ್ಲಾಕ್ ಸ್ಪಾಟ್ ಗಳಲ್ಲಿ ಎಚ್ಚರಿಕೆ ಸೂಚನಾ ಫಲಕ ಅಳವಡಿಸಿ– ಡಿ.ಸಿ

ತುಮಕೂರು : ಜಿಲ್ಲೆಯಲ್ಲಿ ಗುರುತಿಸಲಾದ 40 ಬ್ಲಾಕ್ ಸ್ಪಾಟ್ ಗಳ 100 ಮೀಟರ್ ಅಂತರದಲ್ಲಿ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಸ್ತೆ ಸುರಕ್ಷತೆ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪೆÇಲೀಸ್ ಇಲಾಖೆಯಿಂದ ಗುರುತಿಸಲಾದ 40 ಬ್ಲಾಕ್ ಸ್ಪಾಟ್ ಗಳನ್ನೂ ಗುರುತಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು, ಇದುವರೆಗೂ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ, ಇದಕ್ಕೆ ಸಂಬಂಧ ಪಟ್ಟಂತೆ 40 ಬ್ಲಾಕ್ ಸ್ಪಾಕ್ಟ್ ಗಳಲ್ಲಿ ಅಪಘಾತ ಸಂಭವಿಸಿದರೆ ಸಂಬಂಧ ಪಟ್ಟ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್‍ಗಳೇ ನೇರ ಹೊಣೆಯಾಗಲಿದ್ದಾರೆ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆ, ಪಂಚಾಯ್ ರಾಜ್ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆ ಅಧಿಕಾರಿಗಳು ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರಲ್ಲದೆ, ರಸ್ತೆಗಳಲ್ಲಿ ಅನಗತ್ಯವಾಗಿ ಹಾಕಿರುವ ಸ್ಪೀಡ್ ಬ್ರೇಕರ್ಸ್ ಗಳನ್ನು ತೆರವುಗೊಳಿಸಿ, ಅವಶ್ಯಕತೆ ಇರುವ ಕಡೆ ಮಾತ್ರ ಸ್ಪೀಡ್ ಬ್ರೇಕರ್ಸ್ ಹಳವಡಿಸಬೇಕು ಎಂದು ತಿಳಿಸಿದರು.

ಪೆÇೀಲೀಸ್ ಇಲಾಖೆ ಈಗಾಗಲೇ 40 ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿದ್ದು, ಇದುವರೆಗೆ ಎಷ್ಟು ಅಪಘಾತ ವಲಯಗಳಿಗೆ ಕ್ರಮಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಸಂಬಂಧ ಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಸೂಚನೆ ನೀಡಿದರು. ಓ.ಊ. ಹೈವೇಗಳಲ್ಲಿ ಅಪಘಾತ ಸಂಭವಿಸಿದಾಗ ಆಂಬುಲೆನ್ಸ್ ಹಾಗೂ ಕ್ರೇನ್ ಸೇವೆಗಳು ತಕ್ಷಣ ಕಾರ್ಯನಿರ್ವಹಿಸಬೇಕು, ಹೈವೆಗಳಲ್ಲಿ ಅಪಘಾತ ಸಂಭವಿಸಿದಾಗ ಸಾರ್ವಜನಿಕರು ತುರ್ತು ಸಂದರ್ಭದಲ್ಲಿ 1033 ಎಂಬ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ ಮಾಹಿತಿ ನೀಡಬೇಕು, ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಗೆಯು ಸಾರ್ವಜನಿಕರ ಸೇವೆಗೆ ಸಿದ್ಧರಾಗಿರಬೇಕು ಎಂದು ತಿಳಿಸಿದರು.

ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕೆ.ವಿ ಅಶೋಕ್ ಮಾತನಾಡಿ, ಜಿಲ್ಲೆಯ 40 ಬ್ಲಾಕ್ ಸ್ಪಾಟ್ ಗಳಿಗೆ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಬೇಕು, ಅವಶ್ಯಕವಾದ ಬೆಳಕಿನ ವ್ಯವಸ್ಥೆ, ಪೇಂಟಿಂಗ್ ರಸ್ತೆಯ ಮಧ್ಯದಲ್ಲಿ ಬೆಳೆದಿರುವ ಅನಗತ್ಯ ಗಿಡಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಹೈವೇ ಹಾಗೂ ಇತರ ರಸ್ತೆಗಳಲ್ಲಿ ಕಾನೂನುಬಾಹಿರವಾಗಿ ನಿರ್ಮಿಸಲಾದ ಸ್ಪೀಡ್ ಬ್ರೇಕರ್ಸ್, ಸೂಚನಾ ಫಲಕಗಳ ಕೊರತೆ ಹಾಗೂ ಇತರೆ ಕಾರಣಗಳಿಂದಾಗಿ ಅಪಘಾತ ಸಂಭವಿಸಿ ಪ್ರಾಣಹಾನಿ ಸಂಭವಿಸಿದರೆ, ಸಂಬಂಧಪಟ್ಟ ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್‍ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಜಿ.ರಾಜು, ಪಂಚಾಯತ್ ರಾಜ್ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಹನುಮಂತಪ್ಪ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *