ತುಮಕೂರು : ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳ ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯಾಗಿರುವ ಎತ್ತಿನಹೊಳೆ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲೆಯ ಪಾವಗಡದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಎತ್ತಿನಹೊಳೆ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಈ ಮೂಲಕ ಸಣ್ಣ ನೀರಾವರಿ ಯೋಜನೆಯಲ್ಲಿ ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ತುಂಬಿಸಲಾಗುವುದು. ಅಂತೆಯೇ ಪಾವಗಡದ 23 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಅವರು ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಪಾವಗಡದ ವಿವಿಧ ಕೆರೆಗಳಿಗೆ ನೀರು ತುಂಬುವ ಮೂಲಕ ಈ ಭಾಗದ ರೈತರ ಬದುಕಿಗೆ ಜೀವ ತುಂಬಬೇಕು ಎಂಬುದು ಸ್ಥಳೀಯ ಜನಪ್ರತಿನಿಧಿಗಳ ಬೇಡಿಕೆ. ಮುಂದಿನ ದಿನಗಳಲ್ಲಿ ಅದನ್ನೂ ಮಾಡುತ್ತೇವೆ ಎಂದೂ ಅವರು ತಿಳಿಸಿದರು.
ಪ್ರಸ್ತುತ ಉದ್ಘಾಟನೆಯಾಗಿರುವ ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಪಾವಗಡ ತಾಲೂಕು ಹಾಗೂ ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆಯಿಂದ 6 ತಾಲೂಕುಗಳು ಹಾಗೂ 2 ಪಟ್ಟಣಗಳಿಗೆ ಅನುಕೂಲವಾಗಿದೆ ಎಂದ ಅವರು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ 2529 ಕೋಟಿ ರೂಪಾಯಿ ವೆಚ್ಚದಲ್ಲಿ ಹಿಂದೆ ನಮ್ಮ ಸರ್ಕಾರ ಇದ್ದಾಗ ನಾವೇ ಶಂಕುಸ್ಥಾಪನೆ ಮಾಡಿದ್ದು, ಅವಧಿಗಿಂತ ಮುಂಚಿತವಾಗಿಯೇ ಯೋಜನೆಯನ್ನು ಪೂರ್ಣಗೊಳಿಸಿ ಇಂದು ಉದ್ಘಾಟಿಸಲಾಗಿದೆ. ಈ ಯೋಜನೆಯಿಂದ ತಾಲೂಕಿನ ಹದಿನೇಳುವರೆ ಲಕ್ಷ ಜನರಿಗೆ ಅನುಕೂಲವಾಗಿದ್ದು, ಇನ್ನು ಮುಂದೆ ತಾಲೂಕಿನ ಜನರು, ಮಕ್ಕಳು ಫ್ಲೋರೈಡ್‍ಯುಕ್ತ ನೀರಿನಿಂದ ಅನುಭವಿಸುತ್ತಿದ್ದ ಅಂಗವೈಕಲ್ಯತೆಯಿಂದ ಮುಕ್ತರಾಗಲಿದ್ದಾರೆ. ಪಾವಗಡದ ಜನರಿಗೆ ಇದೊಂದು ಐತಿಹಾಸಿಕ ದಿನ ಎಂದು ಮುಖ್ಯಮಂತ್ರಿ ಹೇಳಿದರು.
ಸೋಲಾರ್ ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯವು ಏμÁ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಏರಲಿದೆ ಎಂದ ಅವರು, ಪ್ರಸ್ತುತ 2050 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಿ ಜನರಿಗೆ ಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ 2000 ಮೆ.ವ್ಯಾ. ವಿದ್ಯುತ್ ಉತ್ಪಾದಿಸಲಾಗುವುದು. ಇದಾದ ಮೇಲೆ ಪಾವಗಡದ ಚಿತ್ರಣವೇ ಬದಲಾಗಲಿದೆ ಎಂದರು.
ರಾಜ್ಯದಲ್ಲಿ ಅನುμÁ್ಠನಗೊಂಡಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳುತ್ತಾರೆ. ಆದರೆ ಇಂದು 700 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದು ಅವರಿಗೆ ಕಾಣುವುದಿಲ್ಲವೇ? ಎಂದ ಅವರು, ಇನ್ನು ಮೂರು ವರ್ಷದ ಅವಧಿಯಲ್ಲಿ ಜನರ ಬೇಡಿಕೆಗೆ ಪೂರಕವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಯೇ ತೀರುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಒಂದು ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಅನುμÁ್ಠನಗೊಳಿಸಲಾಗಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಅನುμÁ್ಠನದಿಂದ ರಾಜ್ಯದ ಅಭಿವೃದ್ಧಿಯಲ್ಲಿ ಎಲ್ಲೂ ಕುಂಠಿತವಾಗಿಲ್ಲ ಎಂದ ಅವರು, ನಮ್ಮ ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ. ಜಿಎಸ್‍ಟಿ ಸಂಗ್ರಹಿಸುವಲ್ಲಿ ರಾಜ್ಯವು ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಜಿಡಿಪಿಯಲ್ಲಿ ದೇಶದಲ್ಲಿಯೇ ಮೂರನೇ ಸ್ಥಾನದಲ್ಲಿದ್ದೇವೆ ಎಂದು ಸಚಿವರು ಹೇಳಿದರು.
ಜಿಲ್ಲೆಯ ಮಹತ್ವದ ನೀರಾವರಿ ಯೋಜನೆಯಾಗಿರುವ ಎತ್ತಿನಹೊಳೆ ಯೋಜನೆಗೆ ಮಾನ್ಯ ಮುಖ್ಯಮಂತ್ರಿಗಳು 23 ಸಾವಿರ ಕೋಟಿ ರೂಪಾಯಿ ಕೊಟ್ಟಿದ್ದಾರೆ. ಶೀಘ್ರವೇ ಯೋಜನೆಯನ್ನು ಪೂರ್ಣಗೊಳಿಸುವಂತೆಯೂ ಸೂಚಿಸಿದ್ದಾರೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸುಮಾರು 714 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಾಯಿತು. 1500 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪ£ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪಾವಗಡ ಶಾಸಕ ಹಾಗೂ ತುಮುಲ್ ಅಧ್ಯಕ್ಷ ಹೆಚ್.ವಿ.ವೆಂಕಟೇಶ್ ಅಧ್ಯಕ್ಷತೆವಹಿಸಿದ್ದರು. ಸಮಾಜಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸಂಸದ ಗೋವಿಂದಕಾರಜೋಳ, ಶಾಸಕರಾದ ಡಿ.ಟಿ.ಶ್ರೀನಿವಾಸ್, ಆರ್.ರಾಜೇಂದ್ರ, ಟಿ.ರಘುಮೂರ್ತಿ, ಮಾಜಿ ಸಚಿವ ವೆಂಕಟರಮಣಪ್ಪ, ಬೆಂಗಳೂರು ಕೇಂದ್ರ ವಲಯ ಪೆÇಲೀಸ್ ಮಹಾನಿರೀಕ್ಷಕ ಲಾಭೂರಾಮ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ., ಜಿಲ್ಲಾ ಪೆÇಲೀಸ್ ಅಧೀಕ್ಷಕ ಕೆ.ವಿ.ಅಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.